ಪುದುವೆಟ್ಟು: ಪ್ರಭಾರ ಪಿಡಿಒ ಆಗಿ ಅಂಬರೀಷ್ ಅಧಿಕಾರ ಸ್ವೀಕಾರ: ರವಿ ಬಣಪ ಗೌಡರಿಗೆ ಬೀಳ್ಕೊಡುಗೆ

0

ಪುದುವೆಟ್ಟು: ಗ್ರಾಮ ಪಂಚಾಯತ್‌ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಅಂಬರೀಷ್ ಅವರು ಅ. 15ರಂದು ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪುದುವೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರವಿ ಬಣಪ ಗೌಡ ಅವರು ಅಧಿಕಾರ ಹಸ್ತಾಂತರಿಸಿದರು. ಬಳಿಕ ಗ್ರಾಮ ಪಂಚಾಯತ್ ವತಿಯಿಂದ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

ಕಳೆಂಜ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಂಬರೀಷ್ ಅವರು ಇನ್ನು ಮುಂದೆ ಪುದುವೆಟ್ಟು ಗ್ರಾಮ ಪಂಚಾಯತ್‌ನ ಪ್ರಭಾರ ಪಿಡಿಒ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಯತೀಶ್, ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಯಶವಂತ್ ಪುದುವೆಟ್ಟು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಪ್ರಸನ್ನ ಪಿ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here