ಅ. 24, 25: ಉಜಿರೆಯಲ್ಲಿ 12ನೇ ಜಿಲ್ಲಾ ಗಮಕ ಸಮ್ಮೇಳನ – ಪತ್ರಿಕಾ ಗೋಷ್ಠಿ

0

ಬೆಳ್ತಂಗಡಿ : ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ನೇತೃತ್ವದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾ ಗಮಕ ಸಮ್ಮೇಳನ ಅ. 24 ಮತ್ತು 25ರಂದು ತಾಲೂಕಿನ ಹಿರಿಯ ಗಮಕಿಗಳಾದ ಜಯರಾಮ ಕುದ್ರೆತ್ತಾಯರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ಗಮಕ ಕಲಾ ಪರಿಷತ್ ಅಧ್ಯಕ್ಷ ಪ್ರೊ. ಮಧೂರು ಮೋಹನ ಕಲ್ಲೂರಾಯ ಹೇಳಿದರು.

ಅವರು ಅ. 19 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ಮತ್ತು ಗಮಕದ ಕುರಿತು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಈಗಾಗಲೇ ಹಲವಾರು ಪೂರ್ವಭಾವಿ ಸಭೆಗಳನ್ನು ಮಾಡಿ ಸಮ್ಮೇಳನಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮ್ಮೇಳನದ ಯಶಸ್ಸಿಗೆ ಹಲವಾರು ಸಮಿತಿಗಳನ್ನು ರಚಿಸಿ ಸಂಚಾಲಕರು, ಉಪಸಂಚಾಲಕರು ಮತ್ತು ಸದಸ್ಯರುಗಳಿಗೆ ನಿರ್ದಿಷ್ಟ ಜವಾಬ್ದಾರಿಗಳನ್ನು ಹಂಚಲಾಗಿದೆ. ತಾಲೂಕಿನ ಹಲವಾರು ಸಂಘ ಸಂಸ್ಥೆಗಳನ್ನು ಸಂಪರ್ಕಿಸಿ ಸಹಕಾರವನ್ನು ಕೋರಿ ಸಮ್ಮೇಳನದ ಯಶಸ್ಸಿಗೆ ಸರ್ವರನ್ನು ಒಳಗೊಳ್ಳುವಂತೆ ಮಾಡಲಾಗಿದೆ.ಎಂದು ಹೇಳಿದರು.

ಅಕ್ಟೋಬರ್ 24 ಬೆಳಿಗ್ಗೆ 10 ಗಂಟೆಗೆ ಸಮ್ಮೇಳನದ ಸರ್ವಾಧ್ಯಕ್ಷರನ್ನು ಮೆರವಣಿಗೆಯ ಮೂಲಕ ಕರೆ ತರಲಾಗುವುದು. ಸಮ್ಮೇಳನವನ್ನು ನಂತರ 10:30ಕ್ಕೆ ಜಗದ್ಗುರು ಶಂಕರಾಚಾರ್ಯ ಶ್ರೀ ತೋಟಕಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದೀಪ ಬೆಳಗುವ ಮೂಲಕ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಪೂರ್ವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಸಮ್ಮೇಳನದ ಸ್ಮರಣ ಸಂಚಿಕೆಯಾದ ಗಮಕ ಜನಾರ್ದನವನ್ನು ಅನಾವರಣ ಗೊಳಿಸಲಿದ್ದಾರೆ.

ಪ್ರೊ ಮಧೂರು ಮೋಹನ ಕಲ್ಲೂರಾಯರ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ದಾಸ ಆಸ್ರಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮೂಡಬಿದ್ರೆ ತಾಲೂಕಿನ ಗಮಕ ಕಲಾ ಪರಿಷತ್ತಿನ ಗೌರವಾಧ್ಯಕ್ಷ ಶ್ರೀಪತಿ ಭಟ್ ಮೂಡಬಿದ್ರೆ, ಕಿನ್ನಿಗೋಳಿಯ ಯುಗಪುರುಷದ ಶ ಭುವನಾಭಿರಾಮ ಉಡುಪ, ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶಶಿಧರ ಜಿ.ಎಸ್., ಉಜಿರೆ ಎಸ್ ಡಿ. ಎಂ ಸೆಕಂಡರಿ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿರಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಟಾನ ಪ್ರಾಯೋಜಿತ ಪಾವಂಜೆ ಹರಿದಾಸ ಲಕ್ಶ್ಮೀನಾರ್ಣಪ್ಪಯ್ಯ ಪ್ರಶಸ್ತಿ ಪ್ರಧಾನ, ಗಮಕ ಕ್ಷೇತ್ರ ಕ್ಕೆ ವಿಶೇಷ ಕೊಡುಗೆ ನೀಡಿದ ಕೆ. ಸುರೇಶ್ ಕುದ್ರೆತ್ತಾಯ, ಪ್ರೊ. ವೇದವ್ಯಾಸ ರಾಮಕುಂಜ, ಹರಿದಾಸ ತೊನ್ಸೆ ಪುಷ್ಕಳ ಕುಮಾರ್, ಕೆಯ್ಯೂರು ನಾರಾಯಣ ಭಟ್, ಗಮಕಿ ಸುವರ್ಣ ಕುಮಾರಿ ಕೆ. ಆರ್, ಎ. ಡಿ. ಸುರೇಶ್ ಇವರನ್ನು ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಗೋಷ್ಠಿಗಳು ನಡೆಯಲಿದ್ದು ರಾಜ್ಯ ಮಟ್ಟದ ಗಮಕಿಗಳು ಗೋಷ್ಠಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಳ್ಳಲಿದ್ದಾರೆ.ಅ. 25ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಬೆಂಗಳೂರು ಕರ್ನಾಟಕ ಕಮಕಲಾ ಪರಿಷತ್ ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ದಕ್ಷಿಣಾಮೂರ್ತಿ ಸಮಾರೋಪ ಭಾಷಣ ಮಾಡಲಿದ್ದಾರೆ.

ಧರ್ಮಸ್ಥಳದ ಡಿ. Harshendra ಕುಮಾರ್, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟನ್ನಾಯ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ದ. ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ. ಪಿ., ಪಾವಂಜೆ ಹರಿದಾಸ್ ಲಕ್ಷ್ಮೀ ನಾರ್ಣಪ್ಪ ಪ್ರತಿಷ್ಠಾನಾದ ಪ್ರದೀಪ್ ಕುಮಾರ್ ಕಲ್ಕೂರ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ. ಶ್ರೀಶ ಮುಚ್ಚಿನ್ನಾಯ, ಬಿ. ಭುಜಬಲಿ ಧರ್ಮಸ್ಥಳ ಭಾಗವಹಿಸಲಿದ್ದಾರೆ.

ಕನ್ನಡ ಕಾವ್ಯ ಪರಂಪರೆಯಲ್ಲಿ ಹಳೆಗನ್ನಡ,, ನಡುಗನ್ನಡ ಸಾಹಿತ್ಯವು ಭಾರತೀಯ ಸಾಂಸ್ಕೃಕ ಮತ್ತು ಜೀವನ ಮೌಲ್ಯಗಳಲ್ಲಿ ಉಳಿಸಿ ಬೆಳೆಸುವಲ್ಲಿ ಗಮಗ ಕಲೆಯನ್ನು ಪ್ರಚುರ ಪಡಿಸುವುದು, ಯುವ ಜನತೆಯತ್ತ ಗಮಕವನ್ನು ವಿಸ್ತರಿಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ, ಸಮ್ಮೇಳನದ ಸ್ಮರಣಸಂಚಿಕೆ ಸಂಚಾಲಕ ಡಾ. ಶ್ರೀಧರ ಭಟ್, ಜತೆ ಕಾರ್ಯದರ್ಶಿ ರಮೇಶ್ ಮಯ್ಯ, ಆರ್ಥಿಕ ಸಮಿತಿಯ ಸಹ ಸಂಚಾಲಕ ಅಶೋಕ ಭಟ್ ಉಜಿರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here