






ಬೆಳ್ತಂಗಡಿ: ಮದ್ದಡ್ಕ ಸಮೀಪದ ಕಿನ್ನಿಗೋಳಿ ಎರಂಗಲ್ಲು ಬಳಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 20ರ ಸಂಜೆ ಸಂಭವಿಸಿದೆ.


ಕಿನ್ನಿಗೋಳಿ ಎರಂಗಲ್ಲು ನಿವಾಸಿ ಮಹಿಳೆಗೆ ಈ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿ ಕಡೆಯಿಂದ ಬಂದ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.









