






ಮಂಗಳೂರು:ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (1 ರಿಂದ 10ನೇ ತರಗತಿವರೆಗೆ) ದಸರಾ ರಜೆಯನ್ನು ವಿಸ್ತರಿಸಲಾಗಿದೆ.


ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು (DDPI) ಅಧಿಕೃತ ಆದೇಶ ಹೊರಡಿಸಿದ್ದು, ಅಕ್ಟೋಬರ್ 22 ರಂದು ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.









