






ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಎನ್. ಜೆ. ಕಡಂಬ ಅವರಿಗೆ ಸಂಘದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಿ ಸಂತಾಪ ಸೂಚಿಸಲಾಯಿತು.


ಎನ್. ಜೆ. ಕಡಂಬ ಅವರು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ ಹಾಗೂ ಬೆಳ್ತಂಗಡಿ ಸಿಐ ಬ್ಯಾಂಕಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್, ನಿರ್ದೇಶಕರಾದ ಮುನಿರಾಜ ಅಜ್ರಿ, ನಾರಾಯಣ ಆಚಾರ್, ಅಶೋಕ್ ರೈ, ಕೆ. ಎಂ. ಶ್ರೀನಾಥ್, ಹರಿಯಪ್ಪ ನಾಯಕ, ಪುರಂದರ, ರಮೇಶ್ ನಲ್ಕೆ, ರಾಧಾ, ಪ್ರೇಮ ಹಾಗೂ ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.









