






ಬೆಳ್ತಂಗಡಿ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ಅ.24ರಂದು ಶನಿವಾರ ಬೆಳ್ತಂಗಡಿಯ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ನ್ಯಾಯವಾದಿ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಭಗೀರಥ ಜಿ. ಅವರು ಉದ್ಘಾಟಿಸಿದರು.ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಡುಪಿ ವಿಭಾಗದ ರೀಜನಲ್ ಪ್ರಾಡಕ್ಟ್ ಹೆಡ್ ಶ್ರೀ ಅವಿನಾಶ್ ಹಾಸ್ಪಾರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್, ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಹಾಗೂ ಭಾರತ್ ಆಟೋ ಕಾರ್ಸ್ ಬೆಳ್ತಂಗಡಿಯ ಟೀಮ್ ಲೀಡರ್ ಮಂದಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 300 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿಯನ್ನು ವಿತರಿಸಲಾಯಿತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಲಾ ₹4,000 ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ತಲಾ ₹4,500 ವಿದ್ಯಾರ್ಥಿವೇತನ ನೀಡಲಾಯಿತು. ಈ ಮೂಲಕ ಸುಮಾರು ₹13 ಲಕ್ಷ ವಿದ್ಯಾರ್ಥಿವೇತನ ವಿತರಿಸಲಾಯಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖಾಧಿಕಾರಿ ಶರತ್ ಕುಮಾರ್, ಕಲೆಕ್ಷನ್ ಮ್ಯಾನೇಜರ್ ರಿಜೇಶ್ ಕುಮಾರ್, ಅಕ್ಷಯ್, ಆನಂದ್ ನಾಯ್ಕ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಾಖಾ ಸಿಬ್ಬಂದಿ ಕುಮಾರಿ ಶಿಲ್ಪಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.









