






ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆಯವರ ಆಶಯದಂತೆ ಮನೆ ಮನೆಯಲ್ಲಿ ಇಂಜಿನಿಯರ್ಗಳು ರೂಪುಗೊಳ್ಳಬೇಕು, ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ತಾಂತ್ರಿಕ ಶಿಕ್ಷಣ ಪಡೆದು ಉನ್ನತ ಸಾಧನೆ ಮಾಡಬೇಕು ಎಂಬ ಉದ್ದೇಶಕ್ಕೆ ಪೂರಕವಾಗಿ ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಲವು ವಿದ್ಯಾರ್ಥಿ ಸ್ನೇಹಿ ಸೌಲಭ್ಯಗಳನ್ನು ಒದಗಿಸುತ್ತಿದೆ. 2027-28ನೇ ಸಾಲಿನ ಪ್ರವೇಶಾತಿಯ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಟ್ಯೂಷನ್ ಶುಲ್ಕ ವಿನಾಯಿತಿ ಹಾಗೂ ವಿಶೇಷ ಶುಲ್ಕ ರಿಯಾಯಿತಿಗಳನ್ನು ಘೋಷಿಸಿರುವುದು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಉತ್ತಮ ಅವಕಾಶವಾಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಸ್ಡಿಎಂಐಟಿ)ಯಲ್ಲಿ 2027-28ನೇ ಶೈಕ್ಷಣಿಕ ಸಾಲಿನ ಬಿ.ಇ. ಕೋರ್ಸ್ಗಳ ಪ್ರವೇಶಾತಿ ಆರಂಭಗೊಂಡಿದ್ದು, ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡೇಟಾ ಸೈನ್ಸ್, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಇನ್ಫರ್ಮೇಶನ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿದೆ.


ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಸೌಲಭ್ಯ
ಮ್ಯಾನೇಜ್ಮೆಂಟ್ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಶೇ.100ರಷ್ಟು ಟ್ಯೂಷನ್ ಶುಲ್ಕ ವಿನಾಯಿತಿ ಸೌಲಭ್ಯವಿದ್ದು, ಎಸ್ಎನ್ಕ್ಯೂ ಶುಲ್ಕವಾಗಿ ಅಂದಾಜು 30 ಸಾವಿರ ರೂ ಪಾವತಿಸಬೇಕಾಗುತ್ತದೆ. ಪಿಯುಸಿ ಪಿಸಿಎಂನಲ್ಲಿ ಶೇ.95 ಅಂಕ ಅಥವಾ ಸಿಇಟಿ ರ್ಯಾಂಕ್ 20,000ರೊಳಗಿರುವ ವಿದ್ಯಾರ್ಥಿಗಳು, ಬೆಳ್ತಂಗಡಿ ತಾಲೂಕಿನ ನಿವಾಸಿಗಳಾಗಿದ್ದು ಪಿಸಿಎಂನಲ್ಲಿ ಶೇ.90 ಅಂಕ ಪಡೆದವರು ಹಾಗೂ ಕ್ರೀಡೆ, ಸಾಂಸ್ಕೃತಿಕ ಅಥವಾ ಪಠ್ಯೇತರ ಚಟುವಟಿಕೆಗಳಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿದವರಿಗೆ ನಿಗದಿತ ಅರ್ಹತೆಗಳ ಆಧಾರದಲ್ಲಿ ಈ ಸೌಲಭ್ಯ ಲಭ್ಯವಿದೆ.
ಎಸ್ಕೆಡಿಆರ್ಡಿಪಿ ಕಾರ್ಯಕರ್ತರು ಹಾಗೂ ಎಸ್ಡಿಎಂ ಉದ್ಯೋಗಿಗಳ ಮಕ್ಕಳಿಗೆ 20ಸಾವಿರ ರೂ. ವಿಶೇಷ ಶುಲ್ಕ ರಿಯಾಯಿತಿ ನೀಡಲಾಗುತ್ತದೆ. ಪಿಸಿಎಂನಲ್ಲಿ ಶೇ.80 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಿಕಲ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಶೇ.20ರಷ್ಟು ಶುಲ್ಕ ರಿಯಾಯಿತಿ ಲಭ್ಯವಿದೆ.
ಸಿಇಟಿ ಮತ್ತು ಡಿಸಿಇಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಸಿಇಟಿ ರ್ಯಾಂಕ್ 10,000ರೊಳಗಿರುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ ವರೆಗೆ, 10,001ರಿಂದ 30,000ರೊಳಗಿನ ರ್ಯಾಂಕ್ ಪಡೆದವರಿಗೆ25 ಸಾವಿರ ರೂ ಹಾಗೂ 30,001ರಿಂದ 50,000ರೊಳಗಿನ ರ್ಯಾಂಕ್ ಪಡೆದವರಿಗೆ 10 ಸಾವಿರ ರೂ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಡಿಪ್ಲೊಮಾ ವಿದ್ಯಾರ್ಥಿಗಳ ಲ್ಯಾಟರಲ್ ಎಂಟ್ರಿ ಪ್ರವೇಶಾತಿಯಲ್ಲಿ ಡಿಸಿಇಟಿ ರ್ಯಾಂಕ್ 500ರೊಳಗಿರುವವರಿಗೆ 1 ಲಕ್ಷದವರೆಗೆ ವಿದ್ಯಾರ್ಥಿವೇತನ ಸೌಲಭ್ಯವಿದೆ. ಇತರ ಅರ್ಹ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಆಯ್ದ ವಿಭಾಗಗಳ ಆಧಾರದಲ್ಲಿ ವಿಶೇಷ ಶುಲ್ಕ ನಿಗದಿಪಡಿಸಲಾಗಿದೆ.
ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ರಿಯಾಯಿತಿ ಸೌಲಭ್ಯಗಳು ಸೀಮಿತ ಸಂಖ್ಯೆಯ ಸೀಟುಗಳಿಗೆ ಮಾತ್ರ ಲಭ್ಯವಿದ್ದು, ಅರ್ಹತೆ ಮತ್ತು ಲಭ್ಯತೆಯ ಆಧಾರದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರವೇಶಾತಿ ವಿಭಾಗವನ್ನು ಸಂಪರ್ಕಿಸಬಹುದು ಎಂದು ಆಡಳಿತ ಮಂಡಳಿ ತಿಳಿಸಿದೆ.
ಸಂಪರ್ಕ: 87621 27991, 98863 27421, 08256-236961. ವೆಬ್ಸೈಟ್: sdmit.in. ಇ-ಮೇಲ್: [email protected].
ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಸ್ಡಿಎಂಐಟಿ) ವತಿಯಿಂದ ಅಕ್ಟೋಬರ್ 29 ಮತ್ತು 30ರಂದು ಎರಡು ದಿನಗಳ ಕಾಲ ಆಯೋಜನೆ ಗೊಂಡಿರುವ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವದ ಕುರಿತು
ಅ. 24 ರಂದು ಎಸ್ ಡಿ ಎಂ ಐಟಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಆರ್ ಹಾಗೂ ಸಿವಿಲ್ ಇಂಜಿನಿಯರ್ ವಿಭಾಗ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಈ ಕುರಿತಾಗಿ ಮಾಹಿತಿ ನೀಡಿದರು.









