ಯುವ ವಾಹಿನಿ ವತಿಯಿಂದ ಬೃಹತ್ ರಕ್ತದಾನ, ವೈದ್ಯಕೀಯ, ನೇತ್ರ ಚಿಕಿತ್ಸಾ ಶಿಬಿರ

0

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ವೈದ್ಯಕೀಯ ಶಿಬಿರ, ನೇತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣೆ, ಗಾಲಿಕುರ್ಚಿ ವಿತರಣೆ, ಸಾಂತ್ವನ ನಿಧಿ ವಿತರಣೆ ಮತ್ತು ವಾಟರ್ ಬೆಡ್ ವಿತರಣಾ ಕಾರ್ಯಕ್ರಮ ಅ. 25 ರಂದು NET ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಜೈನ್ ಪೇಟೆ, ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮವು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಬ್ಲಡ್ ಬ್ಯಾಂಕ್ ಮಂಗಳೂರು, ಕಣಚೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು NET ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಜೈನ್ ಪೇಟೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಜರುಗಿತು.ಬೃಹತ್ ರಕ್ತದಾನ ಶಿಬಿರ ಮತ್ತು ವೈದ್ಯಕೀಯ ಶಿಬಿರವನ್ನು ಬೆಳ್ತಂಗಡಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಉದ್ಘಾಟಿಸಿ ಶುಭ ಹಾರೈಸಿದರು.

ಯುವ ವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಗಾಲಿಕುರ್ಚಿ ವಿತರಣೆ ಮತ್ತು ವಾಟರ್ ಬೆಡ್ ವಿತರಣೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಯುವ ವಾಹಿನಿ ಪದಾಧಿಕಾರಿಗಳು, ವೈದ್ಯರು, ರೆಡ್‌ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, NET ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಹಲವಾರು ಗಣ್ಯರು, ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here