






ಶಿಬರಾಜೆ ಪಾದೆ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ (ರಿ.), ಶಿಬರಾಜೆ ಪಾದೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಅ. 2ರಂದು ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರ ಸಮ್ಮುಖದಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಗೌಡ ನೆಕ್ಕಾರಜೆ, ಕಾರ್ಯದರ್ಶಿಯಾಗಿ ರಾಜೇಶ್ ಶೆಟ್ಟಿ ಕುಟ್ರುಗ, ಕೋಶಾಧಿಕಾರಿಯಾಗಿ ಹರೀಶ್ ಗೌಡ ವಲಗುಡ್ಡೆ, ಉಪಾಧ್ಯಕ್ಷರಾಗಿ ಸಂಜೀವ ದೇವಾಡಿಗ ಬೆರ್ಬಲ್ಲಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಮಹೇಶ್ ನೇಲ್ಯಪಲ್ಕೆ ಆಯ್ಕೆಯಾದರು.
ಸಂಘಟನೆಯ ಅಭಿವೃದ್ಧಿ ಹಾಗೂ ಗ್ರಾಮದ ಸರ್ವತೋಮುಖ ಪ್ರಗತಿಗಾಗಿ ನೂತನ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಸಮಿತಿಯ ಸದಸ್ಯರು ಶುಭಾಶಯ ಕೋರಿದರು.









