






ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ 15 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಶಾಲೆಯ ಅಟೆಂಡರ್ ಶ್ರೀಯುತ ಸಂತೋಷ್ ದೀಪ ಪ್ರಜ್ವಲನೆ ಮಾಡಿ ಬಳಿಕ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೆಯೇ ಈ ಸಂದರ್ಭದಲ್ಲಿ ಅವರ ಸೇವೆಯನ್ನು ಗುರುತಿಸಿ ಸನ್ಮಾನವನ್ನು ಮಾಡಲಾಯಿತು. ಸಹ ಶಿಕ್ಷಕಿ ರಮಾ ರಾಜೇಶ್ ರವರು ವಾಲ್ಮೀಕಿ ಅವರ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು .









