






ಕುಕ್ಕೇಡಿ : ಮಹಾತ್ಮಗಾಂಧಿ ಕುಕ್ಕೇಡಿ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಅ.27ರಂದು ಗ್ರಾಮ ಪಂಚಾಯತ್ ಆವರಣದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋಪಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಗ್ರಾಮ ಸಭೆಯ ಮುನ್ನಡೆಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಪಂಚಾಯತ್ ಕಾರ್ಯದರ್ಶಿ ಕುಂಝ ಅನುಪಾಲನಾ ವರದಿ, ಲೆಕ್ಕಪತ್ರ ವಾಚಿಸಿ , ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳ ವಿವರ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾ ಉಪಾಧ್ಯಕ್ಷ ಶೇಖರ ಕುಕ್ಕೇಡಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.









