







ಕಳೆಂಜ: ಕಾಯರ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.27 ರಂದು ಮಕ್ಕಳಿಗೆ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು.ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಮತ್ತು ಯಂಗ್ ಇಂಡಿಯಾ ಇದರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ಗಳನ್ನು ನೀಡಿ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಯಿತು.ಕಾರ್ಯಕ್ರಮದಲ್ಲಿ ಯಾಥಾರ್ತ್ ಸೋಷಿಯಲ್ ಸಂಸ್ಥೆಯ ಎಂ.ಡಿ. ಈಶ್ವರ್ ಶೆಟ್ಟಿ ಅವರು ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಈ ಬ್ಯಾಗ್ ವಿತರಣೆಗೆ ನಮ್ಮ ಶಾಲೆಯನ್ನು ಆಯ್ಕೆ ಮಾಡಲು ಸಹಕರಿಸಿದ ಈಶ್ವರ್ ಶೆಟ್ಟಿ ಹಾಗೂ ಸಂಸ್ಥೆಗಳಿಗೆ ಶಾಲೆಯ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.









