ವೇಣೂರು: ಬೃಹತ್ ಸ್ವಚ್ಛತಾ ಅಭಿಯಾನದ ಸಮಾರೋಪ

venur swacchatheವೇಣೂರು : ದ.ಕ.ಜಿ.ಪಂ. ಮಂಗಳೂರು, ತಾ.ಪಂ. ಬೆಳ್ತಂಗಡಿ, ಗ್ರಾಮ ಪಂಚಾಯತು ವೇಣೂರು ಸ್ವಚ್ಛಭಾರತ್ ಅಭಿಯಾನ ಯೋಜನೆಯಡಿ ಹಾಗೂ ವಿವಿಧ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನದ ಸಮಾರೋಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ವೇಣೂರು ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಚಂದ್ರು ಎಂ.ಎನ್. ಭಾಗವಹಿಸಿದ್ದರು.
ವೇಣೂರು ವರ್ತಕರ ಸಂಘದ ಅಧ್ಯಕ್ಷ ಭಾಸ್ಕರ ಬಲ್ಯಾಯ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭಾಸ್ಕರ ಬಲ್ಯಾಯ, ಸದಸ್ಯರಾದ ಸತೀಶ್ ಹೆಗ್ಡೆ, ವಿಮಲ, ವೇಣೂರು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವೆಂಕಟೇಶ್ ಎಸ್. ತುಳುಪುಳೆ, ವೇಣೂರು ಗ್ರಾ.ಪಂ. ಪಂ. ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ, ಗ್ರಾ.ಪಂ. ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವೇಣೂರು ಗ್ರಾ.ಪಂ. ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಸ್ವಾಗತಿಸಿ, ಉಪಾಧ್ಯಕ್ಷ ಅರುಣ್ ಕ್ರಾಸ್ತ ವಂದಿಸಿದರು. ಪಂಚಾಯತು ಸಿಬ್ಬಂದಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.