ಉಜಿರೆ ಸನಿವಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಟಿ. ಕೃಷ್ಣಮೂರ್ತಿಯವರಿಗೆ ಪಿಎಚ್‌ಡಿ ಪದವಿ ಪ್ರದಾನ

Advt_NewsUnder_1
Advt_NewsUnder_1

krishnamoorthiಬೆಳ್ತಂಗಡಿ: ಪ್ರಸ್ತುತ ಉಜಿರೆಯ ಸನಿವಾಸ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸು ತ್ತಿರುವ ಟಿ. ಕೃಷ್ಣಮೂರ್ತಿಯವರಿಗೆ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲ್ಲಿರುವ ದಕ್ಷಿಣ ಭಾರತದ ಅಂತರರಾಜ್ಯ ವಿಶ್ವ ವಿದ್ಯಾಲಯವಾದ ದ್ರಾವಿಡಿಯನ್ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.
ಶ್ರೀ ಧ.ಮಂ.ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ. ಜಯಕುಮಾರ ಶೆಟ್ಟಿ ಮಾರ್ಗದರ್ಶನದಲ್ಲಿ ನಡೆಸಿದ ಅರಕನೆಟ್ ಮಾರ್ಕೆಟಿಂಗ್ :ಪ್ರಾಬ್ಲಮ್ಸ್ ಅಂಡ್ ಪ್ರಾಸ್ಪೆಕ್ಟ್ಸ್ – ಎ ಕೇಸ್ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ (ಅಡಿಕೆ ಮಾರುಕಟ್ಟೆ-ಸಮಸ್ಯೆಗಳು ಮತ್ತು ಭವಿಷ್ಯ-ದ.ಕ ಜಿಲ್ಲೆಯ ಅಧ್ಯಯನ) ಎಂಬ ಸಂಶೋಧನಾ ಪ್ರಬಂಧವನ್ನು ಪುರಸ್ಕರಿಸಿ ವಿಶ್ವವಿದ್ಯಾಲಯವು ಟಿ. ಕೃಷ್ಣಮೂರ್ತಿಯವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.
ಟಿ. ಕೃಷ್ಣಮೂರ್ತಿಯವರು ಈ ಹಿಂದೆ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿಯಾಗಿ, ಉಪ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯದ ಉತ್ತಮ ಎನ್‌ಎಸ್‌ಎಸ್ ಅಧಿಕಾರಿ ಎಂಬ ಪ್ರಶಸ್ತಿ ಗಳಿಸಿದ್ದರು. ಹಾಗೆಯೇ ಅಂತರರಾಷ್ಟ್ರೀಯ ಜೇಸಿ ಸಂಸ್ಥೆಯ ಸದಸ್ಯರಾದ ಇವರು ವ್ಯಕ್ತಿತ್ವ ವಿಕಸನದ ರಾಷ್ಟ್ರೀಯ ತರಬೇತಿದಾರರಾಗಿ ವಿವಿಧ ವಿಷಯಗಳಲ್ಲಿ ವಿವಿಧ ಸಂಘಟನೆಗಳ ಸದಸ್ಯರಿಗೆ 2000ಕ್ಕೂ ಮಿಕ್ಕಿ ತರಬೇತಿಗಳನ್ನು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ನೀಡಿದ್ದಾರೆ. ಅಂತರರಾಷ್ಟ್ರೀಯ ಜೇಸಿ ಸಂಸ್ಥೆಯಿಂದ ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಸಮೂಹ ಎಂಬ ಸಾಂಸ್ಕೃತಿಕ ಸಂಘಟನೆಯ ಸ್ಥಾಪಕ ಕಾರ್ಯದರ್ಶಿಗಳಾಗಿ 25 ವರ್ಷಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಅರ್ಥಶಾಸ್ತ್ರ ಹಾಗೂ ವ್ಯಕ್ತಿತ್ವ ವಿಕಸನದ ವಿಷಯದಲ್ಲಿ ಹಲವಾರು ಕಾರ್ಯಾಗಾರಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.