ದ.ಕ. ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಅಬ್ದುಲ್‌ಕರೀಂ ಗೇರುಕಟ್ಟೆ

abdul kareem gerukatteಬೆಳ್ತಂಗಡಿ: ಕರ್ನಾಟಕ ಸರಕಾರದ ವಕ್ಫ್ ಬೋರ್ಡು ಇದರ ದ.ಕ. ಜಿಲ್ಲಾ ಸಲಹಾ ಸಮಿತಿ ಸದಸ್ಯರಾಗಿ ಗೇರುಕಟ್ಟೆಯ ಕೆ.ಎಂ. ಅಬ್ದುಲ್‌ಕರೀಂ ನೇಮಕಗೊಂಡಿದ್ದಾರೆ.
ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್ ಅವರ ಶಿಫಾರಸ್ಸಿನ ಮೇರೆಗೆ ಶಿಕ್ಷಣ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಈ ನೇಮಕಾತಿಯನ್ನು ಮಾಡಿ ಆದೇಶ ಹೊರಡಿಸಿದ್ದಾರೆ.
ಕಳಿಯ ಗ್ರಾ.ಪಂ. ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಅಬ್ದುಲ್‌ಕರೀಂ ಅವರು ಗೇರುಕಟ್ಟೆ ಕಾಲೇಜಿನ ದಶಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಗೇರುಕಟ್ಟೆ ಪ್ರೌಢ ಶಾಲಾ ಎಸ್‌ಡಿಎಂಸಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ
ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿಯಾಗಿ, ಪರಪ್ಪು ಮಸೀದಿಯ ಆಡಳಿತ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ ಜಿಲ್ಲಾ ಸಂಯುಕ್ತ ಜಮಾತಿನ ಸದಸ್ಯರಾಗಿ, ಸೈಂಟ್ ಮೇರಿಸ್ ಶಾಲಾ ಶಿಕ್ಷಕ-ರಕ್ಷಕ ಸಂಘದ ಮಾಜಿ ಸದಸ್ಯರಾಗಿ, ಸರಕಾರಿ ಹಿ.ಪ್ರಾ ಶಾಲೆ ಕೊರಿಂಜದ ಶಾಲಾಭಿವೃದ್ಧಿ ಸಮಿತಿಯಲ್ಲಿ ಪಂಚಾಯತ್ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.