ಪೈಗಂಬರ್ ಜನ್ಮ ದಿನಾಚರಣೆ ಪ್ರಯುಕ್ತ ವಿದ್ಯಾ ವೆಲ್ಫೇರ್ ಅಸೋಸಿಯೇಶನ್‌ನಿಂದ ಹಣ್ಣುಹಂಪಲು ವಿತರಣೆ

Advt_NewsUnder_1
Advt_NewsUnder_1
Advt_NewsUnder_1

fruits vitharane

fruits vitharane1ಬೆಳ್ತಂಗಡಿ : ವಿದ್ಯಾ ವೆಲ್ಫೇರ್ ಅಸೋಸಿಯೇಶನ್ ಬೆಳ್ತಂಗಡಿ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನದ ಅಂಗವಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಜಾತಿಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಯೂತ್ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಹಣ್ಣು ಹಂಪಲು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ವಿದ್ಯಾ ವೆಲ್ಫೇರ್ ಅಸೋಸಿಯೆಶನ್ ಅಧ್ಯಕ್ಷ ಶಾಹಿದ್ ಪಾದೆ ಬೆಳಾಲು, ವಿದ್ಯಾ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಕಳೆದ ೭ವರ್ಷಗಳಿಂದ ಪೈಗಂಬರ್ ಜನ್ಮ ದಿನಾಚರಣೆಯನ್ನು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳನ್ನು ಸಂದರ್ಶಿಸಿ ಹಣ್ಣು ಹಂಪಲು ವಿತರಿಸುವ ಮೂಲಕ ಶಾಂತಿಯ ಸಂದೇಶ ಸಾರುತ್ತಿದ್ದೇವೆ ಎಂದರು.
ಈ ಸಂದರ್ಭ ಎಪಿಎಂಸಿ ನಿರ್ದೇಶಕ ಅಬ್ದುಲ್ ಗಫೂರ್ ಪುದುವೆಟ್ಟು, ಜಿಲ್ಲಾ ಜೆಡಿಎಸ್ ಅಲ್ಪ ಸಂಖ್ಯಾತರ ಘಟಕದ ಸದಸ್ಯ ಅಬ್ದುಲ್ ರಹಿಮಾನ್ ಅಂಗರಕಂಡ ಹಂಝ ಬೊಳ್ಮಿನಾರ್, ದಯಾನಂದ ಗೇರುಕಟ್ಟೆ, ನೌಷಾದ್ ನಲ್ಕೆತ್ತಾರು ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಆದಂ ಟಿ.ಹೆಚ್ ಬೆಳಾಲು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.