ಡಿ. 12ರಂದು ಸಾಮರಸ್ಯ ನಡಿಗೆ : ರಮಾನಾಥ ರೈ

pathrikagosti

pathrikagosti1ಬೆಳ್ತಂಗಡಿ : ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ವಾತಾವರಣ ಕಾಪಾಡುವ ಉದ್ದೇಶದಿಂದ ಡಿ. 12ರಂದು ಫರಂಗಿಪೇಟೆಯಿಂದ ಮಾಣಿಯವರೆಗೆ ಸಾಮರಸ್ಯ ನಡಿಗೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಡಿ. 8ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಮರಸ್ಯದ ವಾತಾವರಣ ಮೂಡಿಸುವ ನಿಟ್ಟಿನಲ್ಲಿ ಇದೊಂದು ಮಹತ್ವವಾದ ಹೆಜ್ಜೆ ಆಗಬೇಕಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕೆ. ವಸಂತ ಬಂಗೇರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಸದಸ್ಯರಾದ ಪೀತಾಂಬರ ಹೇರಾಜೆ, ರಾಮಚಂದ್ರ ಗೌಡ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಶ್ರೀನಿವಾಸ ಕಿಣಿ, ನಗರ ಅಧ್ಯಕ್ಷ ರಾಜಶೇಖರ ಅಜ್ರಿ, ತಾ.ಪಂ, ಜಿ.ಪಂ ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು, ಜೆಡಿಎಸ್, ಸಿಪಿಐ(ಎಂ), ಡಿಎಸ್‌ಎಸ್. ಮಲೆಕುಡಿಯರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.