ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

Advt_NewsUnder_1
Advt_NewsUnder_1
Advt_NewsUnder_1

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯಗಳಾದ ಸುಳ್ಯ, ಗುತ್ತಿಗಾರು, ಎಲಿಮಲೆ ಹಾಗೂ ಬಾಲಕರ ನಿಲಯ ಸುಳ್ಯ ಹಾಗೂ ಅರಂತೋಡು ಇಲ್ಲಿಗೆ 2016-17ನೇ ಸಾಲಿನಲ್ಲಿ ಹೊಸತಾಗಿ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 5ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗ 1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದು, 2ಎ, 2ಬಿ, 3ಎ, 3ಬಿ ಇವರಿಗೆ ವಾರ್ಷಿಕ ವರಮಾನ 44,5೦೦ ರೂ ಹಾಗೂ ವರ್ಗ1ರ ವಿದ್ಯಾರ್ಥಿಗಳಿಗೆ ವಾರ್ಷಿಕ ವರಮಾನ ರೂ.1 ಲಕ್ಷ ಆದಾಯ ಮಿತಿ ಇರುತ್ತದೆ. ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹಾಗೂ ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಭಾವಚಿತ್ರಗಳೊಂದಿಗೆ ಮೇ.31ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಸುಳ್ಯ ತಾಲೂಕು ಪಂಚಾಯತ್‌ನಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಯವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.