ಜು.18 : ಸುಬ್ರಹ್ಮಣ್ಯ ವಿದ್ಯಾರ್ಥಿ ಸರಕಾರದ ಉದ್ಘಾಟನೆ

suddi logoಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ 2016-17ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಉದ್ಘಾಟನೆ ಹಾಗೂ ಕುಮಾರವಾಣಿ ಭಿತ್ತಿಪತ್ರ ಅನಾವರಣವು ಜು೧೮ರಂದು ಅಪರಾಹ್ನ 11.30ಕ್ಕೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಯಲಿದೆ.
ಪ್ರಾಚಾರ್ಯ ಬಿ.ವಿಠಲ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಬಿ.ಎನ್. ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ 2016ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನಿಗಳಾದ ಜ್ಯೋತಿ ಪಿ.-556 (ಕಲಾವಿಭಾಗ) ದಿವ್ಯ ವೈ.ಎಸ್.-571 (ವಾಣಿಜ್ಯ ವಿಭಾಗ) ಮತ್ತು ರಕ್ಷಾ ರಾವ್ -588(ವಿಜ್ಞಾನ ವಿಭಾಗ) ಅವರನ್ನು ಸನ್ಮಾನಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.