HomePage_Banner_
HomePage_Banner_
HomePage_Banner_

ಬೆಳಗಾವಿ ಕಂದಾಯ ಇಲಾಖೆ – 90 ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ

ಬೆಳಗಾವಿ ಜಿಲ್ಲೆಯ ಕಂದಾಯ ಇಲಾಖೆಯ ಅಧೀನದಲ್ಲಿ ಬರುವ ಕಛೇರಿಗಳಲ್ಲಿ ಖಾಲಿ ಇರುವ 61 ಹುದ್ದೆಗಳು ಹಾಗೂ 29
ಹಿಂಬಾಕಿ ಹುದ್ದೆಗಳು ಸೇರಿದಂತೆ ಒಟ್ಟು 90 ಗ್ರಾಮಲೆಕ್ಕಿಗರ ಹುದ್ದೆಳ ಭರ್ತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ
ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ : ದ್ವಿತೀಯ ಪಿ.ಯು.ಸಿ ಅಥವಾ ಸಿ.ಬಿ.ಎಸ್.ಸಿ ನಡೆಸುವ 12 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ವಿದ್ಯಾರ್ಹತೆಯನ್ನು ಅಧಿಸೂಚನೆ ದಿನಾಂಕಕ್ಕೆ ಮುಂಚಿತವಾಗಿ ಪಡೆದುಕೊಂಡಿರಬೇಕು
ಮೇಲ್ಕಂಡ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇನ್ನಿತರ ಯಾವುದೇ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ ಅಥವಾ ಯಾವುದೇ ಮುಕ್ತ ವಿಶ್ವ ವಿದ್ಯಾಯಾಲಯದಿಂದ ಪಡೆದ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ
*ಕಂಪ್ಯೂಟರ್ ಜ್ಞಾನ ಉಳ್ಳವರಾಗಿರಬೇಕು
ವೇತನ ಶ್ರೇಣಿ : ರೂ 11,6೦೦-21೦೦೦/-
ವಯೋಮಿತಿ : ಎಲ್ಲಾ ವರ್ಗದವರಿಗೆ ಕನಿಷ್ಟ ವಯೋಮಿತಿ 18 ವರ್ಷ
ಗರಿಷ್ಟ ವಯೋಮಿತಿ ಈ ಕೆಳಕಂಡಂತಿವೆ :
ಪ.ಜಾ /ಪ.ಪಂ , ಪ್ರವರ್ಗ-1 ರ ಅಭ್ಯರ್ಥಿಗಳಿಗೆ – 40 ವರ್ಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ -38 ವರ್ಷ
ಸಾಮಾನ್ಯ ವರ್ಗ- 35 ವರ್ಷ
ನೇಮಕಾತಿಯ ಗರಿಷ್ಟ ವಯೋಮಿತಿಯನ್ನು ಈ ಕೆಳಕಂಡರಮಟ್ಟಿಗೆ ಸಡಿಲಗೊಳಿಸಲಾಗಿದೆ
*ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು / ಅವಳು ಕೇಂದ್ರ ಸಶಸ್ತ್ರದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳಿಗೆ ೦೩ ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುತ್ತದೋ ಅಷ್ಟು ವರ್ಷಗಳು
*ಅಭ್ಯರ್ಥಿಯು ಅಂಗವಿಕಲನಾಗಿದ್ದರೆ 10 ವರ್ಷಗಳು
*ಅಭ್ಯರ್ಥಿಯು ವಿಧವೆಯಾಗಿದ್ದಲ್ಲಿ 10ವರ್ಷಗಳು
*ಅಭ್ಯರ್ಥಿಗೆ ಕನ್ನಡ ಭಾಷಾ ಜ್ಞಾನ ಅವಶ್ಯಕವಾಗಿರುತ್ತದೆ ಹಾಗೂ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮೊದಲನೇ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸಮಾಡಿರಬೇಕು
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಬೆಳಗಾವಿ ವೆಬ್ ಸೈಟ್ ನ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ , ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ 1೦೦/-
ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ 2೦೦/- ಅರ್ಜಿ ಶುಲ್ಕವನ್ನು ಕಾರ್ಪೊರೇಷನ್ ಬ್ಯಾಂಕ್‌ನ ಯಾವುದೇ ಶಾಖೆಯಲ್ಲಿ ಪಾವತಿಸತಕ್ಕದ್ದು. ಬಳಿಕ ಶುಲ್ಕ ಪಾವತಿಸದ ವಿವರವನ್ನು ಅಪ್‌ಲೋಡ್ ಮಾಡತಕ್ಕದ್ದು
ನೇಮಕಾತಿ ವಿಧಾನ : ಅಭ್ಯರ್ಥಿಗಳ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದಮೇಲೆ ಮಾತ್ರ ಪರಿಗಣಿಸಲಾಗುವುದು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 11-08-2016

ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.