ಸುಳ್ಯದಲ್ಲಿ ತಾಲೂಕು ಹಿರಿಯರ ಕ್ರೀಡಾಕೂಟ

ಸುಳ್ಯ ತಾಲೂಕು ಹಿರಿಯರ ಕ್ರೀಡಾ ಸಂಘ, ಪಂಜ ಸಂಘಟನಾ ಸಮಿತಿ ತಾಲೂಕು ಹಿರಿಯರ ಕ್ರೀಡಾಕೂಟ – 2016, ಸುಳ್ಯ ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್, ಸುಳ್ಯ ವಿಷನ್ ಚಾರಿಟೇಬಲ್ ಟ್ರಸ್ಟ್ ಸುಳ್ಯ, ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ ಸುಳ್ಯ, ಮಾಜಿ ಸೈನಿಕರ ಸಂಘ ಸುಳ್ಯ, ಸಂಧ್ಯಾ ಚೇತನ ಹಿರಿಯ ನಾಗರಿಕ ಸಂಘ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ೬ನೇ ತಾಲೂಕು ಹಿರಿಯರ ಕ್ರೀಡಾಕೂಟ -೨೦೧೬ ಕಾರ್ಯಕ್ರಮವು ನ.13 ರಂದು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ದ್ವಜಾರೋಹಣವನ್ನು ಸಂಧ್ಯಾ ಚೇತನ ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡ ನೆರವೇರಿಸಿದರು. ಕಾರ್ಯಕ್ರಮವನ್ನು ಸುಳ್ಯ ಅಮೆಚೂರು ಕಬಡ್ಡಿ ಅಸೋಸಿಯೇಸನ್ ಅಧ್ಯಕ್ಷ ಎನ್.ಎ. ರಾಮಚಂದ್ರ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ನ.ಪಂ. ಅಧ್ಯಕ್ಷ ಶೀಲಾವತಿ ಮಾಧವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಎಂ.ಎಸ್. ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಘಟನಾ ಸಮಿತಿ ಗೌರವಾಧ್ಯಕ್ಷ ದೇರಣ್ಣ ಗೌಡ ಅಡ್ಡಂತ್ತಡ್ಕ, ಸಮಿತಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಕಾರ್ಯದರ್ಶಿ ದೊಡ್ಡಣ್ಣ ಬರಮೇಲು, ಸುಳ್ಯ ತಾ.ಹಿರಿಯರ ಕ್ರೀಡಾ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕುದ್ವ, ಗೌರವಾಧ್ಯಕ್ಷ ತುಕಾರಾಮ ಏನೆಕಲ್ಲು, ಲಯನ್ಸ್ ಕ್ಲಬ್ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಪಿಂಚಣಿದಾರ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ|ರಂಗಯ್ಯ ಎಸ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.