ಅರಂತೋಡು 63ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

5ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 63ನೇ ಅಖಿಲ ಭಾರತ ಸಹಕಾರ ಸಪ್ತಾಹ -2016ನೇ ಸಾಲಿನ ಅರ್ಜಿಗಳ ಗಣಕೀಕರಣದ ಉದ್ಘಾಟನೆ ಮತ್ತು ಉಚಿತ ಆರೋಗ್ಯ ತಪಾಸಣ ಶಿಬಿರವು ನ.16 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು.

4

ಶಾಸಕ ಎಸ್.ಅಂಗಾರ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಜಿಲ್ಲಾ ಸಹಕಾರಿ ಯೂನಿಯನ್ ಸದಸ್ಯ ಪಿ.ಬಿ.ದಿವಾಕರ ರೈ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಉಬರಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ಷ ಜಾಕೆ ಮಾಧವ ಗೌಡ, ವೆಂಕಟ್ರಮಣ ಸೊಸೈಟಿ ಅಧ್ಯಕ್ಷ ಚಂದ್ರಾ ಕೋಲ್ಚಾರ್, ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಸೊಸೈಟಿ ಅಧ್ಯಕ್ಷ  ಸಂತೋಷ್ ಕುತ್ತಮೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಕಾರಿಗಳಾದ ತಿಮ್ಮಪ್ಪ ಗೌಡ ಉಳುವಾರು, ವಿಷ್ಣುಮೂರ್ತಿ ಹೆಬ್ಬಾರ್, ಯು.ಎಸ್.ವೆಂಕಟ್ರಮ್, ಪಿ.ಎಂ.ಮುತ್ತಣ್ಣ ಗೌಡ, ಹರಿಶ್ಚಂದ್ರ ಮೋಂಟಡ್ಕ, ಗೋಪಾಲಕೃಷ್ಣ ವಾರಣಾಶಿ, ಬಾಲಕೃಷ್ಣ ರೈ, ರಘುನಾಥ ರೈ, ಎನ್.ಜಿ.ಲಕ್ಷ್ಮೀನಾರಾಯಣ, ಲಿಂಗಪ್ಪ ಗೌಡ, ಚಂದ್ರಶೇಖರ ಶಾಸ್ತ್ರಿ, ಶಿವಪ್ರಸಾದ್ ಮಾದನಮನೆ, ಪಟೇಲ್ ನಾಗಪ್ಪ ಗೌಡ ಕೂಜುಗೋಡು, ಲಿಂಗಪ್ಪ ಗೌಡ, ವೀರಪ್ಪ ಗೌಡ, ಎನ್.ಹೊನ್ನಪ್ಪ ಗೌಡ, ಧರ್ಮಪಾಲ ಗೌಡ ಗಟ್ಟಿಗಾರು ಅವರನ್ನು ಅಲ್ಲದೆ ವಲಯ ಮೇಲ್ವಿಚಾರಕ ಚಂದ್ರಶೇಖರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನಿನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಶಿಬಿರ ಉದ್ಘಾಟಿಸಿದರು. ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿದರು. ಗ್ರಾ.ಪಂ. ಉಪಾಧ್ಯಕ್ಷ ನಿತ್ಯಾನಂದ ಕುಕ್ಕಂಬಳ ವಂದಿಸಿದರು. ಶಿಕ್ಷಕ ಕಿಶೋರ್ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರಿ ಉಪಹಾರ ಮತ್ತು ಭೋಜನದ ವ್ಯವಸ್ಥೆ ಮಾಡಲಾಗಿತ್ತು. ತಾಲೂಕಿನ ಎಲ್ಲಾ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಸಿಬ್ಬಂದಿ ವರ್ಗದವರು, ನವೋದಯ ಸ್ವಸಹಾಯ ಸಂಘದ ಸದಸ್ಯರು ಸಪ್ತಾಹದಲ್ಲಿ ಪಾಲ್ಗೊಂಡಿದ್ದರು.
6 copy

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.