ಅಮರಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ

Amarajyoti rashtriya sapthaha copyಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ನ.19 ರಂದು ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು. ಕಾಲೇಜಿನ ಆಡಳಿತಾತ್ಮಕ ಸಲಹೆಗಾರರಾದ ಪಿ.ಭುಜಂಗ ಶೆಟ್ಟಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಐಕ್ಯತಾ ದಿನದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಲ್ಲಾ ವಿದ್ಯಾರ್ಥಿಗಳಿಗೂ ’ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ’ವನ್ನು ಹಿಂದಿ ಉಪನ್ಯಾಸಕರಾದ ಮಂಜುನಾಥ.ಎಸ್. ರವರು ಬೋಧಿಸಿದರು. ಕಾಲೇಜಿನ ಪ್ರಾಚಾರ್ಯರಾದ ಡಾ| ಯಶೋದಾ ರಾಮಚಂದ್ರ, ಉಪಪ್ರಾಚಾರ್ಯರಾದ ಫಾತಿಮತ್ ಅಶೀದಾ ಹಾಗೂ ಇತರ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಐಕ್ಯತಾ ಸಪ್ತಾಹದ ಅಂಗವಾಗಿ ಏಳು ದಿನಗಳ ಪರ್ಯಂತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.