ನ.26ರಿಂದ ಡಿ.11 ರ ವರೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ

sಕುಕ್ಕೇ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನವಂಬರ್ 26 ರಿಂದ ಡಿಸೆಂಬರ್ 11 ರವರೆಗೆ ನಡೆಯಲಿದೆ ಎಂದು ದೇವಸ್ಥಾನದದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಡಿಮದ್ದು ಪ್ರದರ್ಶನಕ್ಕೆ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದು, ಅದರ ಬದಲಿಗೆ ಈ ವರ್ಷದಿಂದ ಲೇಸರ್‌ಶೋ ನಡೆಸಲು ನಿರ್ಧರಿಸಲಾಗಿದೆ. ನವಂಬರ್ 28 ರಂದು ಲಕ್ಷದೀಪೋತ್ಸವ ನಡೆಯಲಿದ್ದು, ಸುಮಾರು 25  ಸಾವಿರ ಮಣ್ಣಿನ ಹಣತೆಗಳನ್ನು ಇದಕ್ಕಾಗಿ ಖರೀದಿಲಾಗಿದೆ. ಸಾರ್ವಜನಿಕರು ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಸಹಕಾರಿಬೇಕು ಎಂದವರು ಮನವಿ ಮಾಡಿದರು. ಹೊಸ ವ್ಯವಸ್ಥಾಪನಾ ಸಮಿತಿ ಅಸ್ತಿತ್ವಕ್ಕೆ ಬಂದ ಬಳಿಕ ಸ್ವಚ್ಛತೆಗೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈಗಾಗಲೇ 25 ಡಸ್ಟ್‌ಬಿನ್‌ಗಳನ್ನು ಖರೀದಿಸಿ ಅಗತ್ಯವಿರುವಲ್ಲಿ ಇಡಲಾಗಿದೆ ಎಂದೂ ಅವರು ತಿಳಿಸಿದರು.
ಸಮಿತಿ ಸದಸ್ಯರಾದ ಮಹೇಶ್ ಕುಮಾರ್ ಕರಿಕ್ಕಳ, ಬಾಲಕೃಷ್ಣ ಬಳ್ಳೇರಿ, ದಮಯಂತಿ ಕೂಜುಗೋಡು, ಮಾಧವ, ಸಿಇಒ ನಿಂಗಯ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.