ಸುಳ್ಯ ಜೋಸೆಫ್ ಶಾಲಾ ವಾರ್ಷಿಕ ಕ್ರೀಡಾಕೂಟ

St joseph kridakutaಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ ಸಂಚಾಲಕ ಫಾದರ್ ವಿನ್ಸೆಂಟ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಕ್ರೀಡಾಪಟು, ಶಾಲಾ ಹಳೆ ವಿದ್ಯಾರ್ಥಿ ರಾಹುಲ್ ದಾಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಮಕೃಷ್ಣ ರಾವ್, ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ರಾವ್, ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷ ಅರುಳಪ್ಪನ್, ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ ವೇದಿಕೆಯಲ್ಲಿದ್ದರು.
ಅಸ್ಮಿನಾ ಸ್ವಾಗತಿಸಿ ಸುಚಿನ್ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.