ಬೆಳ್ಳಾರೆಯಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ

Advt_NewsUnder_1
Advt_NewsUnder_1
Advt_NewsUnder_1

Suddi logo copy

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ,ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ವತಿಯಿಂದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಆನಂದ ಪಡ್ಪುರವರ ಅಧ್ಯಕ್ಷತೆಯಲ್ಲಿ ಸೆ.೬ ರಂದು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಸುಳ್ಯ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾರವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಮಹಿಳೆಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಹಿಳೆಯರು ಮನೆಯಲ್ಲಿ ವಿವಿಧ ಬಗೆ ಬಗೆಯ ತಿಂಡಿಗಳನ್ನು ಮಾಡಿ ತಂದಿದ್ದರು. ಕಾರ್ಯಕ್ರಮದ ಮೊದಲು ಪೌಷ್ಟಿಕ ಆಹಾರ ಪದಾರ್ಥಗಳನ್ನು ರುಚಿ ನೋಡಿ ಪ್ರಥಮ, ದ್ವಿತೀಯ,ತೃತೀಯ ಸ್ಥಾನಗಳನ್ನು ನೀಡಲಾಯಿತು.ಸುಮಾರು ೩೧ ಮಂದಿ ಮಹಿಳೆಯರು ಬೇರೆ ಬೇರೆ ರೀತಿಯ ಪೌಷ್ಟಿಕ ಆಹಾರವನ್ನು ತಯಾರಿಸಿ ತಂದು ಪ್ರದರ್ಶನಕ್ಕಿಟ್ಟಿದ್ದರು. ಪ್ರಥಮ ಸ್ಥಾನವನ್ನು ಸವಿತಾ ಪೈ,ದ್ವಿತೀಯ ಸ್ಥಾನವನ್ನು ಅಕ್ಷತಾ ಕಾವಿನಮೂಲೆ,ತೃತೀಯ ಸ್ಥಾನವನ್ನು ಲಲಿತಾ ಮೂಲ್ಯರವರು ಪಡೆದುಕೊಂಡರು. ಹಾಗೂ ಭಾಗವಹಿಸಿದವರೆಲ್ಲರಿಗೂ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು.ವೇದಿಕೆಯಲ್ಲಿ ಶ್ರೀಮತಿ ಸವಿತಾ ರೈ ಪನ್ನೆ ಉಪಸ್ಥಿತರಿದ್ದರು. ಶ್ರೀಮತಿ ಇಂದಿರಾ ಪ್ರಾರ್ಥಿಸಿ,ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ ನೆಟ್ಟಾರು ಸ್ವಾಗತಿಸಿ, ವಂದಿಸಿದರು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಲೋಚನಾರವರು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.