ಬೆಳ್ಳಾರೆ ಜ್ಞಾನದೀಪದಲ್ಲಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ

a rudset copy

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಇದರ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮವನ್ನು ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜಿತ್ ಕೆ ರಾಜಣ್ಣವರ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಜಿರೆ ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವ ಉದ್ಯೋಗ ಮಾಹಿತಿ ನೀಡಿದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಕೆ ವಿನಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ರುಡ್‌ಸೆಟ್‌ನ ಆಸರೆ ಸಂಘದ ಸ್ಥಾಪಕಾಧ್ಯಕ್ಷ ಸುನಿಲ್ ರೈ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಉಪನ್ಯಾಸಕ ತೀರ್ಥಾನಂದ ಕಲ್ಮಡ್ಕ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.