ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ “ಸಹಕಾರಿ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಸನ್ಮಾನ

rajendra kumar sanmana copy

ಇತ್ತೀಚೆಗಷ್ಚೇ “ಬೆಸ್ಟ್ ಚೇರ್ಮನ್” ಎಂಬ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದಂತಹ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ದ.ಕ. ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆ ಅವರು ಮಂಗಳೂರಿನ ರಾಜೇಂದ್ರ ಕುಮಾರ್ ಅವರ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿರೇಂದ್ರ ಕುಮಾರ್, ಉಪಾಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ನಿರ್ದೇಶಕರುಗಳಾದ ಮಹಮ್ಮದ್ ಕುಂಞ ಗೂನಡ್ಕ, ಕೆ.ಆರ್.ಜಗದೀಶ್ ರೈ, ಗಣಪತಿ ಭಟ್, ಎಚ್.ಹಮೀದ್, ಬಿ.ಎಸ್.ಯಮುನಾ ಹಾಗೂ ರಾಜೀವಿ ಉಪಸ್ಥಿತರಿದ್ದರು.
ಈ ವೇಳೆ ರಾಜ್ಯ ಅಪೆಕ್ಸ್ ಬ್ಯಾಂಕ್‌ನಿಂದ ಅತ್ಯುತ್ತಮ ಸಹಕಾರಿ ಸಂಘವೆಂದು ಪ್ರಶಸ್ತಿಯನ್ನು ಪಡೆದಂತಹ ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸೋಮಶೇಖರ್ ಕೊಯಂಗಾಜೆಯವರಿಗೆ ಪ್ರಶಸ್ತಿ ಪತ್ರ ಹಾಗೂ ನಗದನ್ನು ನೀಡಿ ಅಭಿನಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.