ಅನ್ಸಾರಿಯಾ ಅನಾಥಾಶ್ರಮಕ್ಕೆ ಗೇರು ನಿಗಮ ಅಧ್ಯಕ್ಷರ ಭೇಟಿ

Advt_NewsUnder_1
Advt_NewsUnder_1
Advt_NewsUnder_1

Untitled-1 copy
ಕರ್ನಾಟಕ ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲನಿಗಳ ಮೂಲಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ರಸ್ತೆ, ಚರಂಡಿ ಮೊದಲಾದವುಗಳ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರವು ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ರೂ. ೫೦ ಲಕ್ಷ ಬಿಡುಗಡೆಗೊಳಿಸಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ರಾಜ್ಯ ಗೇರು ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್ ಹೇಳಿದರು.
ನಿಗಮದ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಸುಳ್ಯಕ್ಕೆ ಭೇಟಿ ನೀಡಿದ ಖಾದರ್‌ರವರು ಸುಳ್ಯದ ಜಟ್ಟಿಪ್ಪಳ್ಳದಲ್ಲಿರುವ ಅನ್ಸಾರಿಯಾ ಅನಾಥಾಶ್ರಮಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.
ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್ ಜನತ ಅಧ್ಯಕ್ಷತೆ ವಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯ ಸಂಶುದ್ದೀನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್.ಎಸ್. ಕರೀಂ, ರಾಜ್ಯ ಆಹಾರ ಜಾಗೃತದಳದ ಸದಸ್ಯ ಟಿ.ಎಸ್. ಅಬ್ದುಲ್ಲಾ ಹಾಜಿ ಉಳ್ಳಾಲ, ಜಿಲ್ಲಾ ಯೋಜನಾ ಸುತಿ ಸದಸ್ಯ ಕೆ.ಎಂ. ಮುಸ್ತಫ, ವರ್ತಕರ ಸಂಘದ ಉಪಾಧ್ಯಕ್ಷ ಹಾಜಿ ಅಬ್ಬಾಸ್ ಕಟ್ಟೆಕ್ಕಾರ‍್ಸ್, ಅನ್ಸಾರಿಯಾ ಜುಮ್ಮಾ ಮಸೀದಿ ಖತೀಬರಾದ ಉಮ್ಮರ್ ಮುಸ್ಲಿಯಾರ್ ಮರ್ದಾಳ ಮೊದಲಾದವರು ಭಾಗವಸಿದ್ದರು. ಸಂಸ್ಥೆಯ ವ್ಯವಸ್ಥಾಪಕ ಓವೈಸ್ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.