HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವೇಣೂರು : 63ನೇ ಅಖಿಲ ಭಾರತ ಸಹಕಾರ ಸಪ್ತಾಹ-2016

venuruವೇಣೂರು : ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಸರಕಾರದ ವಿಶಿಷ್ಟ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಉದ್ದೇಶವನ್ನಿಟ್ಟುಕೊಂಡ 63ನೇ ಅಖಿಲ ಭಾರತ ಸಹಕಾರ ಸಪ್ತಾಹ-೨೦೧೬ವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಚಂದ್ರಹಾಸ ಕುಕ್ಕೇಡಿ, ಜಗದೀಶ್ ಕುಕ್ಕೇಡಿ, ಪ್ರಸ್ತುತ ಸೇನಾ ಸೇವೆಯಲ್ಲಿರುವ ಸುರೇಶ್ ಕುಮಾರ್ ಕರಿಮಣೇಲು, ಹರೀಶ್ಚಂದ್ರ ಅಂಡಿಂಜೆ, ರಾಧಾಕೃಷ್ಣ ಮೂಡುಕೋಡಿಯವರನ್ನು ಗೌರವಿಸಲಾಯಿತು.
ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಅಡಿಕೆ ಮಾರಾಟ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಕ್ಯಾಂಪ್ಕೊ ಅಧ್ಯಕ್ಷ ಸತೀಶ್ ಚಂದ್ರ ಎಸ್.ಆರ್, ದ.ಕ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಇ.ಸುಂದರ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಜಯಕೀರ್ತಿ ಜೈನ್, ವೇಣೂರು ಗ್ರಾ.ಪಂ ಉಪಾಧ್ಯಕ್ಷ ಅರುಣ್ ಕ್ರಾಸ್ತಾ, ತಾಲೂಕು ಸಹಕಾರಿ ಯೂನಿಯನ್ ಅರ್ಧಯಕ್ಷ ಪುಷ್ಪರಾಜ್ ಹೆಗ್ಡೆ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳಾದ ಸುಭಾಶ್ಚಂದ್ರ ರೈ, ಜಿ.ಭಗೀರಥ, ಅರವಿಂದ ಜೈನ್, ಸತೀಶ್ ಕೆ, ರಾಜೀವ ರೈ, ನಾರಾಯಣ ರಾವ್, ಮುನಿರಾಜ ಅಜ್ರಿ, ಉಪಾಧ್ಯಕ್ಷ ವಿ.ಟಿ ಸೆಬಾಸ್ಟಿಯನ್ ಹಾಗೂ ಸಂಘದ ನಿರ್ದೇಶಕರುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.