ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಡಿ. 17ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ವಹಿಸಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಉಪಾಧ್ಯಕ್ಷ ಜಯಂತ ನಡುಬೈಲು, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್, ನಿವೃತ್ತ ಎಸ್.ಪಿ., ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪದ್ಮನಾಭ ಮರೋಳಿ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಮಾನಂದ ಸಾಲಿಯಾನ್ ಮುಂಡೂರು, ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಅಧ್ಯಕ್ಷ ಪ್ರಶಾಂತ್ ಮಚ್ಚಿನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.