ಬೃಹತ್ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ

Advt_NewsUnder_1
Advt_NewsUnder_1

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಆರೋಗ್ಯ ಸಮಿತಿ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಯುವವಾಹಿನಿ ಬೆಳ್ತಂಗಡಿ ಘಟಕ ಹಾಗೂ ಯುವವಾಹಿನಿ ವೇಣೂರು ಘಟಕ ಇವರ ನೇತೃತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಕಸ್ತೂರ್ಬಾ ದಂತ ಮಹಾವಿದ್ಯಾಲಯ, ಕೆ.ಎಂ.ಸಿ ಮಂಗಳೂರು ಇವರ ಸಹಯೋಗದೊಂದಿಗೆ ಬೃಹತ್ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು(ಜ. 20) ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಶಾಸಕ, ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ ಉದ್ಘಾಟನೆಗೊಳಿಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಿಲ್ಯ ಪ್ರಸಿದ್ಧ ನಾಟಿ ವೈದ್ಯ ಬೇಬಿ ಪೂಜಾರಿ, ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಕೆ.ಎಂ.ಸಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಬಟ್ ಪಿರೇರಾ, ಬಿಲ್ಲವ ಮಹಾಮಂಡಲ ಉಪಾಧ್ಯಕ್ಷ ಪೀತಾಂಬರ ಹೇರಾಜೆ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.