ಧರ್ಮಸ್ಥಳ : ಇಂದು ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ಮೂವತ್ತಾರನೇ ವರ್ಧಂತ್ಯುತ್ಸವದ ಅಂಗವಾಗಿ ಫೆ. 2ರಂದು ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿ ಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಿತು.
ಅಜಿತ್ ಕುಮಾರ್ ಹಚ್ಚಾಡಿ, ರವೀಂದ್ರ ಇಂದ್ರ, ಶಿಶಿರ್ ಮತ್ತು ಕೀರ್ತಿ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಿದರು. ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಇಂದು(ಫೆ. 3) ಬೆಳಿಗ್ಗೆ ರತ್ನಗಿರಿಗೆ ಭವ್ಯ ಅಗ್ತೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು. ಕಾರ್ಕಳ, ನರಸಿಂಹರಾಜಮಠ ಮತ್ತು ಸೋಂದಾ ಸ್ವಾದಿ ಜೈನ ಮಠದ ಭಟ್ಟಾರಕರುಗಳು ಮಂಗಲ ಪ್ರವಚನ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.