ಕುಲಾಲ-ಕುಂಬಾರರ ಸಮಾವೇಶ ಮತ್ತು ಹಕ್ಕೊತ್ತಾಯ

ಬೆಳ್ತಂಗಡಿ : ಬೆಳ್ತಂಗಡಿ ಕುಲಾಲ-ಕುಂಬಾರರ ಸಮಾವೇಶ ಮತ್ತು ಹಕ್ಕೊತ್ತಾಯ ಸಮಿತಿ ಇದರ ನೇತೃತ್ವದಲ್ಲಿ, ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ, ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಂಘ, ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಹಯೋಗದಲ್ಲಿ ಕುಲಾಲ ಕುಂಬಾರರ ಸಮಾವೇಶ ಮತ್ತು ಹಕ್ಕೊತ್ತಾಯ ಫೆ. 4ರಂದು ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ಬೃಹತ್ ಹಕ್ಕೊತ್ತಾಯ ಜಾಥಾವನ್ನು ಮಂಗಳೂರು ಬರ್ಕೆ ಫ್ರೆಂಡ್ಸ್‌ನ ಸ್ಥಾಪಕಾಧ್ಯಕ್ಷ ಯಜ್ಞೇಶ್ ಕುಲಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಕ.ರಾ.ಕುಂ ಮಹಾ ಸಂಘದ ಗೌರವಾಧ್ಯಕ್ಷ ಡಾ| ಎಂ.ವಿ ಕುಲಾಲ್, ಬಂಟ್ವಾಳ ನಗರಸಭೆ ಮಾಜಿ ಅಧ್ಯಕ್ಷೆ ಶ್ರೀಮತಿ ಯಶೋಧ ಕೃಷ್ಣಪ್ಪ ಕುಲಾಲ್, ಕರ್ನಾಟಕ ರಕ್ಷಣಾವೇದಿಕೆ ಜಿಲ್ಲಾಧ್ಯಕ್ಷ ಅನಿಲ್ ದಾಸ್, ಬೈಂದೂರು ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಮಂಗಳೂರು ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜಪ್ಪ ಮೂಲ್ಯ, ಕಾರ್ಕಳ ಸಹಾಯಕ ಕೃಷಿ ನಿರ್ದೇಶಕ ಜಯರಾಜ್‌ಪ್ರಕಾಶ್, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕ ಗೋಪಾಲ್ ಕುಲಾಲ್ ಗೋವಿಂದ ತೋಟ ಮೊದಲಾದವರು ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮವನ್ನು ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಹಾಗೂ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಕುಲಾಲ-ಕುಂಬಾರರ ಸಮಾವೇಶ ಮತ್ತು ಹಕ್ಕೊತ್ತಾಯ ಸಮಿತಿ ಅಧ್ಯಕ್ಷ ಲ| ಹರೀಶ್ ಕಾರಿಂಜ ವಹಿಸಿದ್ದರು. ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘದ ಕಾರ್ಯಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಉಳ್ತೂರು ಹಕ್ಕೊತ್ತಾಯ ಮಂಡಿಸಿದರು. ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘದ ಶಿವಕುಮಾರ್ ಚೌಡಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕ ಕೆ. ವಸಂತ ಬಂಗೇರ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಆರ್. ಶ್ರೀನಿವಾಸ್, ತಾ. ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಪದ್ಮ ಮೂಲ್ಯ ಅನಿಲಡೆ, ಶ್ರೀ ಕ್ಷೇತ್ರ ನಡುಬೊಟ್ಟು ಧರ್ಮದರ್ಶಿ ರವಿ ಎನ್., ಕುಲಾಲ ಕುಂಬಾರರ ಯುವ ವೇದಿಕೆ ರಾಜ್ಯಾಧ್ಯಕ್ಷ ತೇಜಸ್ವೀರಾಜ್, ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಸುಜಿರ್ ಕುಡುಪು, ವೈದ್ಯಕೀಯ ಪ್ರಕೋಷ್ಠ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಪ್ರ. ಕಾರ್ಯದರ್ಶಿ ಡಾ| ಶ್ರೀನಿವಾಸ್ ವೇಲು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಜಾತ್ಯಾತೀತ ಜನತಾದಳ ಜಿಲ್ಲಾ ಉಪಾಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ವೈದ್ಯ ಡಾ| ನಾಗರಾಜ್ ಕೆ ಮಾಲೂರು, ರಾಜ್ಯ ಕುಂಬಾರರ ಮಹಾಸಂಘದ ಸಂಘಟನಾ ಕಾರ್ಯದರ್ಶಿ ಹೆಚ್. ಪದ್ಮಕುಮಾರ್, ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಕುಲಾಲ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಲೋಕೇಶ್ ಕುಲಾಲ್, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸದಸ್ಯ ಆರ್.ಕೆ ಪೃಥ್ವಿರಾಜ್ ಎಡಪದವು, ದ.ಕ ಕರಾವಳಿ ಕುಲಾಲ ಕುಂಬಾರ ಯುವವೇದಿಕೆ ಜಿಲ್ಲಾಧ್ಯಕ್ಷ ಜಯಶ್ ಗೋವಿಂದ್, ಉಡುಪಿ ಕರಾವಳಿ ಕುಲಾಲ ಕುಂಬರ ಯುವ ವೇದಿಕೆ ಜಿಲ್ಲಾಧ್ಯಕ್ಷ ಸತೀಶ್ ಕುಲಾಲ್ ನಡೂರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.