ಉಜಿರೆಯಲ್ಲಿ ಅಂತರ್‌ವಿವಿ ನೆಟ್‌ಬಾಲ್ ಪಂದ್ಯಾವಳಿ

ಉಜಿರೆ, : ಉಜಿರೆಯ ಎಸ್‌ಡಿಎಂ ಕಾಲೇಜಿನ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು ಫೆ.೨೫ರಿಂದ ೨೮ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಅಂತರ್ ವಿವಿ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾವಳಿಗೆ ಸಾಕ್ಷಿಯಾಗಲಿದೆ.
ಪ್ರತಿ ದಿನ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಮತ್ತು ಮಧ್ಯಾಹ್ನ ೩ರಿಂದ ೧೦.೩೦ರವರೆಗೆ ಎರಡು ಹಂತಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಫೆ.೨೫ರ ಸಂಜೆ ೫ ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಬೆಳ್ತಂಗಡಿಯ ಶಾಸಕ ಕೆ.ವಸಂತ ಬಂಗೇರ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಫೆಬ್ರವರಿ ೨೮ರಂದು ಬೆಳಿಗ್ಗೆ ೧೧.೩೦ಕ್ಕೆ ಎಸ್.ಡಿ.ಎಂ. ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.