ಬೆಳ್ತಂಗಡಿ : ಹಕ್ಕುಪತ್ರ ವಿತರಣೆ

  ಬೆಳ್ತಂಗಡಿ : ಮಾ. 5 ರ ಮೊದಲು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅರಣ್ಯ ಸಚಿವ ರಮಾನಾಥ ರೈ ಬೆಳ್ತಂಗಡಿಗೆ ಆಗಮಿಸಿ ಅರಣ್ಯ ಜಮೀನಿನ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆ, 94ಸಿ , 94ಸಿಸಿ ಯೋಜನೆಯಡಿ ಹಕ್ಕುಪತ್ರ ವಿತರಿಸಲು ಇರುವ ತೊಡಕುಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದರು.
ಅವರು ಬೆಳ್ತಂಗಡಿ ನಗರ ಪಂಚಾಯತ್ ಸಭಾಂಗಣದಲ್ಲಿ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡುತ್ತಿದ್ದರು.
ಮುಂದಿನ ಎರಡು ಅಕ್ರಮ ಸಕ್ರಮ ಬೈಠಕ್ ನಡೆಯಲಿದ್ದು, ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಸಮಿತಿಯ ಮುಂದೆ ಮಂಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದ ಶಾಸಕರು, ಯಾವುದೇ ಸಬೂಬು ಹೇಳದೆ ಅಧಿಕಾರಿಗಳು ಜವಾಬ್ದಾರಿಯಿಂದ ಎರಡು ವಾರಗಳಲ್ಲಿ ಅಕ್ರಮ ಸಕ್ರಮ, 94ಸಿ, 94ಸಿಸಿ ಯೋಜನೆಗಳ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.