ಬಿಲ್ಲವ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಶೈಕ್ಷಣಿಕ ಕಾರ್ಯಾಗಾರದ ಸಮಾರೋಪ

ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆ, ಶೈಕ್ಷಣಿಕ ಸಮಿತಿ, ಯುವ ವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕ ಇವುಗಳ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಮತ್ತು ಏಳು ವಾರಗಳ ವರೆಗೆ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದ ಸಮಾರೋಪ ಸಮಾರಂಭ ಮಾ.11 ರಂದು ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ನಡೆಯಿತು.
ಸಂಘದ ಗೌರವಾಧ್ಯಕ್ಷ ಶಾಸಕ ಹಾಗೂ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷ ಕೆ.ವಸಂತ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ, ಶೈಕ್ಷಣಿಕ ಕಾರ್ಯಾಗಾರದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದ ವಿದ್ಯಾರ್ಥಿಗಳ ಉತ್ತಮನಾಗರಿಕರಾಗಬೇಕು ಎಂಬುದು ಸಂಘದ ಉದ್ದೇಶ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆಯರೂ ಪುರುಷರಂತೆ ಸರಿಸಮಾನರಾಗಿದ್ದು, ಎಲ್ಲಾ ಕಾರ್ಯಗಳನ್ನೂ ಮಾಡಲು ಸಮರ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಮಾಜದ ಅಭಿವೃಧ್ಧಿಯಲ್ಲಿ ಭಾಗಿಯಾಗಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ| ಮಧುಮಾಲ.ಕೆ. ಮಹಿಳಾ ದಿನಾಚರಣೆ ಬಗ್ಗೆ ಮಾತನಾಡುತ್ತಾ ಸಮಸ್ತ ಕುಟುಂಬ ನೆಮ್ಮದಿಯಿಂದಿರಬೇಕಾದರೆ ಮನೆಯ ಮಹಿಳೆ ನೆಮ್ಮದಿಯಿಂದ ಇರಬೇಕು. ಮಹಿಳೆಯರು ಅವಕಾಶಗಳು ಬಂದಾಗ ಅಂತಹ ಸಂದರ್ಭದಲ್ಲಿ ಸದುಪಯೋಗ ಪಡಿಸಿಕೊಂಡು ತಮ್ಮ ಶಕ್ತಿಯನ್ನು ತೋರಿಸಬೇಕು. ಮನೆಯ ಎಲ್ಲಾ ಕೆಲಸಗಳಲ್ಲಿ ಪುರುಷರು ಮಕ್ಕಳು ಅವರಿಗೆ ನೆರವಾಗಬೇಕು ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರು ನಾರಾಯಣ ಸ್ವಾಮೀ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರಾ ವರ್ಪಾಳೆ ವಹಿಸಿ ಸಂಘದ ಎಲ್ಲಾ ಚಟುವಟಿಕೆಗಳಿಗೆ ಸಹಕರಿಸುತ್ತಿರುವ ಸಮಾಜ ಬಾಂಧವವರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಹಕಾರ ನೀಡಿದ ಅದ್ಯಾಪಕರುಗಳನ್ನು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಶ್ರೀಮತಿ ಸುಜಿತಾ ವಿ ಬಂಗೇರಾ, ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ಪ್ರೇಮಾ ಉಮೆಶ್, ಶ್ರೀಮತಿ ವಿನೋದಿನಿ ರಾಮಪ್ಪ, ಮಾಜಿ ಕಾರ್ಯದರ್ಶಿ ಶಾಂತಾ ಬಂಗೇರ ಇವರುಗಳನ್ನು ಗೌರವಿಸಲಾಯತು. ಬಿಲ್ಲವ ಮಹಿಳಾ ವೇದಿಕೆಯ ಗ್ರಾಮ ಸಮಿತಿಯ ಅಧ್ಯಕ್ಷರುಗಳನ್ನು ಗುರುತಿಸಿ ಗೌರವಿಸಲಾಯಿತು. ಗುರುವಾಯನಕೆರೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಗನ್ನಾಥ, ಶಿಕ್ಷಕ ಗೋಪಾಲ ಹಾಗೂ ಭಾಗವಹಿಸಿದ್ದ ವಿಧ್ಯಾರ್ಥಿಗಳಾದ ಆಕಾಶ್ ನಾರಾವಿ ದೀಕ್ಷಾ ಮಡಂತ್ಯಾರು, ಅನುಕ್ಷಿತಾ ನಾರಾವಿ ಅನಿಸಿಕೆ ವ್ಯಕ್ತಪಡಿಸಿದರು. ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಗುರುದೇವ ಕಾಲೇಜಿನ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಉಪ್ಪಾರು, ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ, ವೇಣೂರು ಘಟಕದ ಅಧ್ಯಕ್ಷ ನಿತೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಯಶೋಧರ ಸುವರ್ಣ, ಸಂಘದ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರುಪಮಾ ಪ್ರಸನ್ನ, ಆಶಾ ಶಾಂತಿ ಮಧುರಾ ರಾಘವ, ಜಯಶ್ರೀ ಉಮೆಶ್ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಜಿತಾ.ವಿ ಬಂಗೇರಾ ಸ್ವಾಗತಿಸಿದರು. ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರಾಜಶ್ರೀ ರಮಣ್ ಮಹಿಳಾ ವೇದಿಕೆ ನಡೆದು ಬಂದ ದಾರಿಯ ಬಗ್ಗೆ ವಿವರ ನೀಡಿದರು. ಮಾಜಿ ಅಧ್ಯಕ್ಷೆ ವಿನೋದಿನಿ ರಾಮಪ್ಪ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು. ಶ್ರೀಮತಿ ಸುಧಾಮಣಿ.ಆರ್ ಕಾರ್ಯಕ್ರಮ ನಿರೂಪಿಸಿ ಬಿಲ್ಲವ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾ ಎನ್ ನಾವರ ವಂದಿಸಿದರು. ಸಂಘದ ನಿರ್ದೆಶಕರು, ಗ್ರಾಮ ಸಮಿತಿಗಳ ಪದಾದಿಕಾರಿಗಳು, ಶೈಕ್ಷಣಿಕ ಕಾರ್ಯಾಗಾರದಲ್ಲಿ ಬಾಗವಹಿಸಿ  ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೆತ್ತವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.