ಬೆಳ್ತಂಗಡಿ: ಬಿಜೆಪಿ ಮಂಡಲದ ವಿಶೇಷ ಸಭೆಗೆ ರಾಜ್ಯ ಉಸ್ತುವಾರಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ


\

ಬೆಳ್ತಂಗಡಿ: ಬಾರತೀಯ ಜನತಾ ಪಾರ್ಟಿ (ಬಿಜೆಪಿ) ಇದರ ಮಂಡಲ ಸಮಿತಿಗೆ ಅಧಿಕೃತ ಭೇಟಿ ಹಾಗೂ ಚುನಾವಣಾ ಪೂರ್ವ ಸಿದ್ಧತಾ ಪ್ರೇರಣಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರಪ್ರಧಾನ್ ಇಂದು (ಮಾ.24) ಬೆಳ್ತಂಗಡಿಗೆ ಭೇಟಿ ನೀಡಿದರು. ಎಸ್‌ಡಿಎಂ ಕಲಾಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ರಂಜನ್ ಜಿ ಗೌಡ ವಹಿಸಿದ್ದು, ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಮಾಜಿ ಶಾಸಕ ಆಯನೂರು ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಪ್ರ. ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಚುನಾವಣಾ ಪ್ರಭಾರಿ ಹಾಗೂ ಮಾಜಿ ಶಾಸಕಿ ಶೈಲಜಾ ಭಟ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಮತ್ತು ಪ್ರಭಾಕರ ಶೆಟ್ಟಿ ಉಪ್ಪಡ್ಕ ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.