ಕಣಿಯೂರು ಶ್ರೀ ರಾಮ ಸೇವಾ ಸಮಿತಿ ಇದರ ರಜತ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಕಣಿಯೂರು: ಶ್ರೀ ರಾಮ ಸೇವಾ ಸಮಿತಿ ಕಣಿಯೂರು- ಕಸಬಾ ಶ್ರೀ ರಾಮ ನವಮಿ ಹಾಗೂ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಇದರ ರಜತ ಮಹೋತ್ಸವ ಕಾರ್ಯಕ್ರಮವು ಮಾ.25 ರಂದು ಜರುಗಿತು. ಈ ಸಂದರ್ಭದಲ್ಲಿ ಉಡುಪಿ ಶ್ರೀ ಪೇಜಾವರ ಅಧೊಕ್ಷಜ ಮಠದ ಹಿರಿಯ ಸ್ವಾಮೀಜಿ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಕಿರಿಯ ಸ್ವಾಮೀಜಿ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ಶ್ರೀ ಪಾದಂಗಳವರು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ವಿದ್ವಾನ್ ದೇವಿಕುಮಾರ್ ಅಸ್ರಣ್ಣ ವಹಿಸಿದ್ದರು.
ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಸಂಚಾಲಕರಾದ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಶ್ರೀ ಕಟೀಲು 6 ಮೇಳಗಳ ಒಟ್ಟು 350 ಕಲಾವಿದರಿಗೆ ಗೌರವಾರ್ಪಣೆ ಮಾಡಲಾಯಿತು. ರಾತ್ರಿ ಶ್ರೀ ರಾಮ ನವಮಿ ಪ್ರಯುಕ್ತ 25 ನೇ ವರ್ಷದ ಸೇವಾ ಬಯಲಾಟ ಪ್ರದರ್ಶನಗೊಂಡಿತು.
ಕಣಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜರುಗಿದ ಕಾರ್ಯಕ್ರಮವು ವೇದಮೂರ್ತಿ ಕೆ.ಎಂ ಸುಬ್ರಹ್ಮಣ್ಯ ಮುಚ್ಚಿನ್ನಾಯ ಇವರ ವೈದಿಕ ನೇತೃತ್ವದಲ್ಲಿ ಜರುಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.