HomePage_Banner_
HomePage_Banner_
HomePage_Banner_

ಕಾಂಗ್ರೆಸ್ ಅಭ್ಯರ್ಥಿ ಬಂಗೇರ ನಾಮಪತ್ರ ಸಲ್ಲಿಕೆ.

Advt_NewsUnder_1

 ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ವಸಂತ ಬಂಗೇರ ರವರು ಎ.20 ರಂದು ಮದ್ಯಾಹ್ನ ಬೆಳ್ತಂಗಡಿ ಅಂಬೇಡ್ಕರ್ ಭವನದ ಎದರು ನಡೆದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಬಳಿಕ ಮೆರವಣಿಗೆ ಹೊರಟು ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಇಚ್ಚಿಲ ಸುಂದರ ಗೌಡ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಶ್ರೀನಿವಾಸ ಕಿಣಿ, ನಗರ ಅಧ್ಯಕ್ಷ ರಾಜಶೇಖರ ಅಜ್ರಿ, ಕೆಪಿಸಿಸಿ ಸದಸ್ಯರಾದ ಪೀತಾಂಬರ ಹೇರಾಜೆ, ನ್ಯಾಯವಾದಿ ರಾಮಚಂದ್ರ ಗೌಡ, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಭಾಸ್ಟಿನ್, ಜಿ.ಪಂ ಸದಸ್ಯರಾದ ಧರಣೇಂದ್ರ ಕುಮಾರ್, ನಮಿತಾ, ಶೇಖರ ಕುಕ್ಕೇಡಿ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷ ಚಂದನ್ ಕಾಮತ್, ಇಂಟಕ್ ಅಧ್ಯಕ್ಷ ಸುಭಾಶ್ಚಂದ್ರ ರೈ, ಕಿಸಾನ್ ಘಟಕದ ಅಧ್ಯಕ್ಷ ಪ್ರಮೋದ್ ಕುಮಾರ್ ರೆಖ್ಯ, ಮಹಿಳಾ ಘಟಕದ ಅಧ್ಯಕ್ಷೆ ಉಷಾ ಶರತ್, ಎ.ಪಿ.ಎಂ.ಸಿ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಚುನಾವಣಾ ಉಸ್ತುವಾರಿಗಳಾದ ವಿಜಯಕುಮಾರ್ ರೈ, ಸೈಮನ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಡಿಸಿಸಿ ಕಾರ್ಯದರ್ಶಿ ಹಾಗೂ ಬಂಟ್ವಾಳ ಕ್ಷೇತ್ರ ಉಸ್ತುವಾರಿ ಜಗದೀಶ್ ಡಿ, ಜಿಲ್ಲಾ ಕಾಂಗ್ರೆಸ್‌ನ ಬಿ.ಎ ಅಬ್ದುಲ್ ಹಮೀದ್, ಮಹಿಳಾ ಘಟಕದ ಹಾಜಿರಾ, ಜಿಲ್ಲಾ ಸಮಿತಿಯ ಯು.ಎ ಹಮೀದ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್, ಅಲ್ಪಸಂಖ್ಯಾತ ಘಟಕದ ಅಶ್ರಫ್ ನೆರಿಯ, ತಾ.ಪಂ ಸದಸ್ಯರಾದ ಜಯಶೀಲ, ಸುಶೀಲ, ಜಯರಾಮ, ಕೇಶವತಿ ಉಪಸ್ಥಿತರಿದ್ದರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.