ಧರ್ಮಸ್ಥಳ : ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎ.27 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಂಟ್ವಾಳದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಧ್ಯಾಹ್ನ 1.10 ಕ್ಕೆ ಹೆಲಿಕಾಪ್ಟರ್ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಧರ್ಮಸ್ಥಳ ಬೀಡಿನಲ್ಲಿ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಹೆಗ್ಗಡೆಯವರು ರಾಹುಲ್ ಗಾಂಧಿಯವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಚುನಾವಣಾ ವೀಕ್ಷಕರಾದ ವೇಣುಗೋಪಾಲ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯದರ್ಶಿ ವೆಂಕಟೇಶ್, ಪಕ್ಷದ ಅಭ್ಯರ್ಥಿ ಶಾಸಕ ಕೆ.ವಸಂತ ಬಂಗೇರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್, ಕೇಂದ್ರ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ ಅಜ್ರಿ ಮೊದಲಾದವರು ಉಪಸ್ಥಿತರಿದ್ದರು.