ಅನುಗ್ರಹ ಪ. ಪೂ ಕಾಲೇಜು ಉಜಿರೆಗೆ ಶೇ. 100 ಫಲಿತಾಂಶ

Advt_NewsUnder_1
Advt_NewsUnder_1
Advt_NewsUnder_1

ಅನುಗ್ರಹ ಪ. ಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ಎರಡು ವಿಭಾಗಗಳಿದ್ದು ಈ ಪೈಕಿ ಎರಡೂ ವಿಭಾಗದಿಂದಲೂ ಪರೀಕ್ಷೆಗೆ ಹಾಜರಾದ ಎಲ್ಲರೂ ಉತ್ತೀರ್ಣರಾಗುವ ಮೂಲಕ ಸಂಸ್ಥೆ 100 ಶೇ. ಫಲಿತಾಂಶ ದಾಖಲಿಸಿದೆ.
ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ 10 ಮಂದಿ ಪರೀಕ್ಷೆಗೆ ಹಾಜರಾಗಿ 10 ಮಂದಿಯೂ ಉತ್ತೀರ್ಣರಾಗಿದ್ದಾರೆ. 7 ಮಂದಿ ಪ್ರಥಮ ಶ್ರೇಣಿ, 2 ಮಂದಿ ದ್ವಿತೀಯ ಶ್ರೇಣಿ ಮತ್ತು ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಈ ಪೈಕಿ ಎಮ್.ಜೆ ಜಿತಿನ್ ಸೆಬಾಸ್ಟಿಯನ್ 434 ಅಂಕ ಪಡೆದು ವಿಭಾಗಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 40  ಮಂದಿಯಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಪೈಕಿ ಉನ್ನತ ಶ್ರೇಣಿಯಲ್ಲಿ 8 ಮಂದಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ 6ಮಂದಿ ಉನ್ನತ ಶ್ರೇಣಿಯಲ್ಲಿ,27 ಮಂದಿ ಪ್ರಥಮ ಶ್ರೇಣಿಯಲ್ಲಿ, 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಮತ್ತು 2 ಮಂದಿ ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಿಯೋನಾ ರೋಶನಿ ಡಿಸೋಜಾ ಅವರು 568 ಅಂಕ ಪಡೆದು ಕಾಲೇಜಿನ ವಿಭಾಗಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.