ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರ ಸಮಾರೋಪ.

ಬೆಳ್ತಂಗಡಿ: ದಕ್ಷಿಣ ಕನ್ನಡ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಬೆಳ್ತಂಗಡಿ, ಎಸ್.ಎಮ್.ಹೆಚ್.ಐ.ಸಿ ಸುರಕ್ಷಾ ಕಾರ್ಯಕ್ರಮದ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರ ಸಮಾರೋಪ ಸಮಾರಂಭ ಹಾಗೂ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮವು ಮೇ.19 ರಂದು ಜರುಗಿತು.
ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಪ್ರಿಯಾ ಚಾಕೋ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಳೆಕೋಟೆ ಕಲ್ಪತರು ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ವಂ.ಫಾ| ಜೋಸ್ ವಲಿಯ ಪರಂಬಿಲ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಧರಣೇಂದ್ರ ಕೆ. ಜೈನ್, ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ, ವೇಣೂರು ಕೃಷಿ ಪತ್ತಿನ ಸಂಘದ ಉಪಾಧ್ಯಕ್ಷ ಸಯ್ಯದ್ ಹಸನ್ ಉಳ್ತೂರು, ಮಂಗಳೂರು ಕೈಕಂಬ ಸ್ನೇಹಸದನ ಆರೈಕೆ ಮತ್ತು ಬೆಂಬಲ ಕೇಂದ್ರದ ನಿರ್ದೇಶಕರಾದ ವಂ.ಫಾ| ತೇಜಿ ತೋಮಸ್, ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿರ್ದೇಶಕ ವಂ.ಫಾ| ಜೋಸ್ ಆಯಾಂಕುಡಿ, ನವ ಚೈತನ್ಯ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರೇಮ ಮೊದಲಾದವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.