ಧರ್ಮಸ್ಥಳ ಸೂತ್ರನೇತಿಗೆ ವಿಶ್ವ ದಾಖಲೆ : ನ್ಯಾಚುರೋಪತಿ ವಿದ್ಯಾರ್ಥಿಗಳ ಸಾಧನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಧರ್ಮಸ್ಥಳದಲ್ಲಿ ಉಜಿರೆ ಎಸ್ ಡಿ ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದ 368 ವಿದ್ಯಾರ್ಥಿಗಳ ಸೂತ್ರನೇತಿ ಕ್ರಿಯೆ ಪ್ರದರ್ಶನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 4 ನೇ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಉಜಿರೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೂತ್ರ ನೇತಿ ಪ್ರದರ್ಶಿಸಿದರು.

ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ನಡೆದ ಪ್ರದರ್ಶನದಲ್ಲಿ ಕಾಲೇಜಿನ 368 ಯೋಗಪಟುಗಳು ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಏಕ ಕಾಲದಲ್ಲಿ ಒಂದೇ ಸ್ಥಳದಲ್ಲಿ ಸೂತ್ರನೇತಿ ಕ್ರಿಯೆ ಮಾಡಿರುವುದು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಾಗಿದೆ.

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸೂತ್ರನೇತಿ ಒಟ್ಟು ಐದು ನಿಮಿಷದ ಪ್ರಕ್ರಿಯೆಯಾಗಿದ್ದು, ಒಂದು ನಿಮಿಷದಲ್ಲಿ ಏಕಕಾಲದಲ್ಲಿ ಎಲ್ಲಾ ವಿದ್ಯಾರ್ಥಿಗಳು ನಾಸಿಕದ ದ್ವಾರದ ಮೂಲಕ ರಬ್ಬರ್ ನಳಿಕೆಯನ್ನು ಬಾಯಿಯ ಮೂಲಕ ಹೊರ ತೆಗೆದಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.