HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ಅಜ್ರಿ ಪತ್ನಿ ಭಾರತಿ .ಆರ್.ಜೈನ್ ನಿಧನ.

ನಡ: ನಡ ಗ್ರಾಮದ ಮೂಡಬೆಟ್ಟು ಕೆಳಗಿನ ಸುರ್ಯ ಲಾಲ್‌ಚಂದ್ರ ರಾಜಾವತಿ ಮನೆ ನಿವಾಸಿ ಶ್ರೀಮತಿ ಭಾರತಿ ಆರ್.ಅಜ್ರಿ(5೦ವ) ಅವರು ಜೂ.25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತಿ ದ.ಕ ಜಿಲ್ಲಾ ಪರಿಷತ್‌ನ ಮಾಜಿ ಸದಸ್ಯ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಬಿ. ರಾಜಶೇಖರ ಅಜ್ರಿ, ಪುತ್ರ ಆಶ್ರಯ್ ಅಜ್ರಿ, ಪುತ್ರಿ ಸಮ್ಯಕ್ತ ಆರ್.ಅಜ್ರಿ, ಅಳಿಯ ಭರತ್ ಆರ್. ಅಜ್ರಿ ಸೇರಿದಂತೆ ಕುಟುಂಬಸ್ಥರನ್ನು ಬಂಧು-ವರ್ಗದವರನ್ನು ಅಗಲಿದ್ದಾರೆ. ಮೃತರ ಮನೆಗೆ ಮಾಜಿ ಶಾಸಕ ಕೆ. ವಸಂತ ಬಂಗೇರ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಬಿಜೆಪಿ ಜಿಲ್ಲಾ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್ ಹಾಗೂ ಬ್ಲಾಕ್ ಕಾಂಗ್ರೆಸ್‌ನ ನಗರ ಮತ್ತು ಗ್ರಾಮೀಣ ಘಟಕಗಳ ಪದಾಧಿಕಾರಿಗಳು, ಡಿ.ಸಿ.ಸಿಯ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಡರು, ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.