ನಡ: ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಸಾಮಾಜಿಕ ಅರಣ್ಯ, ಬೆಳ್ತಂಗಡಿ ವಲಯ. ಇವುಗಳ ಸಹಯೋಗದಲ್ಲಿ ನಡ ಪ್ರೌಢ ಶಾಲಾ ವಠಾರದಲ್ಲಿ “ವನಸಿರಿ” ಔಷಧೀಯ ವನದ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮವು ಜು.7 ರಂದು ಜರುಗಿತು.
ಶಾಸಕ ಹರೀಶ್ ಪೂಂಜ ರವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಜಿ.ಪ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಸದಸ್ಯ ಎಸ್. ಎಲ್.ಭೋಜೇ ಗೌಡ ,ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ ಅಧ್ಯಕ್ಷೆ ದಿವ್ಯ ಜ್ಯೋತಿ, ಬೆಳ್ತಂಗಡಿ ಜಿ.ಪಂ ಉಪಾಧ್ಯಕ್ಷೆ ಸೌಮ್ಯಲತಾ ಜಯಂತ ಗೌಡ, ತಾ.ಪಂ ಉಪಾಧ್ಯಕ್ಷೆ ವೇದಾವತಿ,ನಡ ಪಂ .ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಅಯ್ಯಣ್ಣನವರ್, ನಡ ಗ್ರಾ.ಪಂ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಸುಧಾಕರ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್, ನಡ ಶಾಲಾ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಬಿ.ರಾಜಶೇಖರ್ ಅಜ್ರಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.