ಧರ್ಮಸ್ಥಳ: ಕೊಕ್ಕಡ ಹೋಬಳಿಯ 2018-19 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವು ಜು. 8 ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ , ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್ , ಕೊಕ್ಕಡ ಹೋಬಳಿ ವ್ಯಾಪ್ತಿಯ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕಿನ ಎಲ್ಲಾ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದಿಂದ ಗ್ರಾಮ ಪಂಚಾಯತ್ ಸಭಾಭವನದವರೆಗೆ ರೈತ ಜಾಥಾ ಕಾರ್ಯಕ್ರಮ ಜರುಗಿತು.