ಬೆಳಾಲಿನಲ್ಲಿ ಬೃಹತ್ ರಕ್ತದಾನ ಶಿಬಿರ.

Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಶ್ರೀರಾಮ ಶಾಖೆ ಬೆಳಾಲು ಮತ್ತು ಸೇವಾ ಭಾರತಿ ಕನ್ಯಾಡಿ ಇದರ ಜಂಟಿ ಆಶ್ರಯದಲ್ಲಿ ಜು.8 ರಂದು ಬೃಹತ್ ರಕ್ತದಾನ ಶಿಬಿರ ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಕೊಲ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೊಲ್ಪಾಡಿ ರಾಜರಾಮ್ ಶರ್ಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷತ್ ಶ್ರೀರಾಮ ಶಾಖೆ ಬೆಳಾಲಿನ ಅಧ್ಯಕ್ಷ ವಿನೂತನ್ ಬಿ.ಪ್ರವೀಣ್( ನವೀನ) ಓಣ್ಯಾಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ಯಾಡಿ ಸೇವಾ ಭಾರತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ| ಎಂ.ಎಂ ದಯಾಕರ್, ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಪಿ.ತಿಮ್ಮಪ್ಪ ಗೌಡ ಬನಂದೂರು, ಬೆಳಾಲು ಗ್ರಾ,ಪಂ ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ, ಮಂಗಳೂರು ಎ.ಜೆ ಆಸ್ಪತ್ರೆಯ ಗೋಪಾಲಕೃಷ್ಣ ಭಾಗವಹಿಸಿದ್ದರು
ಕಾರ್ಯಕ್ರಮದಲ್ಲಿ ಸೇವಾ ಭಾರತಿಯ ಹರೀಶ್ ರಾವ್ ಮುಂಡ್ರುಪ್ಪಾಡಿ, ಸುರಕ್ಷಾ ಮೆಡಿಕಲ್‌ನ ಶ್ರೀಧರ್, ರಾಘವೇಂದ್ರ ಬೈಪಡಿತ್ತಾಯ, ಸೇವಾಭಾರತಿ ಬೆಳಾಲು ಸಂಯೋಜಕ ಯಶವಂತ ಬನಂದೂರು, ಸ್ಥಳೀಯ ವಿವಿಧ ಸಂಘಟನೆಗಳ ಮುಖ್ಯಸ್ಥರು, ಸದಸ್ಯರುಗಳು ಉಪಸ್ಥಿತರಿದ್ದು ಸಹಕರಿಸಿದರು.
ಶಶಿಧರ ಆಚಾರ್ಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುರೇಂದ್ರ ಗೌಡ ಸುರುಳಿ ಸ್ವಾಗತಿಸಿ, ಶಿವಪ್ರಸಾದ್ .ಕೆ. ಬೆಳಾಲು ಕಾರ್ಯಕ್ರಮ ನಿರೂಪಿಸಿ, ರಮೇಶ ಗೌಡ ಮರಕ್ಕಡ ವಂದಿಸಿದರು. ಕಾರ್ಯಕ್ರಮದಲ್ಲಿ 113 ಮಂದಿ ರಕ್ತದಾನ ನೀಡಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.