ಜು.16: ಮರೋಡಿ ದೇವಸ್ಥಾನದಲ್ಲಿ ಮೃತ್ಯುಂಜಯ ಯಾಗ, ವನಮಹೋತ್ಸವ.

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಸಂಕ್ರಾಮಣದ ಪ್ರಯುಕ್ತ ಇದೇ ಜು.16 ರಂದು  ಬೆಳಿಗ್ಗೆ 9.30ರಿಂದ ಮೃತ್ಯುಂಜಯ ಯಾಗ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ವನಮಹೋತ್ಸವ: ಅಂದು ಬೆಳಿಗ್ಗೆ 9.00 ಗಂಟೆಗೆ ಮರೋಡಿ ಗ್ರಾಮ ಅರಣ್ಯ ಸಮಿತಿ ವತಿಯಿಂದ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮವು ಸಮಿತಿಯ ಅಧ್ಯಕ್ಷ ಜಯಂತ ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವೇಣೂರು ವಲಯದ ವಲಯಾರಣ್ಯಾಧಿಕಾರಿ ಪ್ರಶಾಂತ್‌ ಪೈ, ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಮತ್ತಿತರರು ಭಾಗವಹಿಸಲಿದ್ದಾರೆ. ದೇವಸ್ಥಾನದ ಸುತ್ತಮುತ್ತ ವಿವಿಧ ಜಾತಿಯ ಗಿಡ ನಡೆಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.