ಮರೋಡಿ ದೇವಸ್ಥಾನದಲ್ಲಿ ವನಮಹೋತ್ಸವ.

Advt_NewsUnder_1
Advt_NewsUnder_1
Advt_NewsUnder_1
ಮರೋಡಿ: ಅರಣ್ಯ ಇಲಾಖೆ, ಗ್ರಾಮ ಅರಣ್ಯ ಸಮಿತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಒಕ್ಕೂಟದ ವತಿಯಿಂದ ಮರೋಡಿ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು. ವೇಣೂರು ವಲಯಾರಣ್ಯಾಧಿಕಾರಿ ಪ್ರಶಾಂತ್‌ ಕುಮಾರ್‌ ಪೈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
 ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ,ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಒಕ್ಕೂಟದ ವಲಯಾಧ್ಯಕ್ಷ ಯಶೋಧರ ಬಂಗೇರ, ಗ್ರಾ.ಪಂ ಸದಸ್ಯೆ ಪದ್ಮಶ್ರೀ ಜೈನ್‌, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಗಿರೀಶ್‌ ಕುಮಾರ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ವಿಜಯ ಆರಿಗ, ರತ್ನಾಕರ ಬುಣ್ಣಾನ್‌, ಸೇವಾ ಪ್ರತಿನಿಧಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಶುಭರಾಜ ಹೆಗ್ಡೆ ಸ್ವಾಗತಿಸಿದರು. ಬಾಲಕೃಷ್ಣ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ವನಪಾಲಕ ಅಜಿತ್‌ ಕುಮಾರ್ ವಂದಿಸಿದರು. ಮರೋಡಿ ದೇವಸ್ಥಾನದ ಆವರಣದಲ್ಲಿ 200ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತು ಹಾಗೂ ಗ್ರಾಮಸ್ಥರಿಗೆ ಗಿಡಗಳನ್ನು ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.